ಬೆಂಗಳೂರು: ಕನ್ನಡಪರ ಸಂಘಟನೆಗಳು ಕರೆ ನೀಡಿರುವ ನಾಳೆಯ ಬಂದ್ ಗೆ ಅವಕಾಶ ಇಲ್ಲ. ದಯಮಾಡಿ ಯಾರೂ ಬಂದ್ ಮಾಡಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕನ್ನಡಪರ ಸಂಘಟನೆಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಬನಶಂಕರಿಯ ಸತ್ತೂರು ಸದನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ನಾಳೆಯ ಬಂದ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಂದ್ ಮಾಡದಂತೆ ಜನತೆಗೆ ಹಾಗೂ ಕನ್ನಡ ಪರ ಹೋರಾಟಗಾರರಿಗೆ ಮನವಿ ಮಾಡಿಕೊಂಡರು. ಬಂದ್ ಮಾಡಿ ಜನರಿಗೆ ತೊಂದರೆ ಕೊಡುವ ಕೆಲಸ ಮಾಡಬೇಡಿ. ಬಂದ್ ಮಾಡುವ ಅಗತ್ಯ ಇಲ್ಲ. ಎಲ್ಲ ಸಮಾಜವನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ ಎಂದರು.
ಕನ್ನಡಕ್ಕೆ ಏನೇನೋ ಆದ್ಯತೆ ಕೊಡಬೇಕೋ, ಅದೆಲ್ಲವನ್ನೂ ಕೊಡಲು ನಾನು ಸಿದ್ಧನಿದ್ದೇನೆ. ಕನ್ನಡದ ಮುಖಂಡರು ಏನು ಹೇಳ್ತಾರೋ ಅದನ್ನು ನಾನು ಮಾಡಲು ಸಿದ್ಧನಿದ್ದೇನೆ. ದಯಮಾಡಿ ಬಂದ್ ಗೆ ಎಲ್ಲಿಯೂ ಕೂಡ ಅವಕಾಶ ಮಾಡಿ ಕೊಡಬೇಡಿ. ದಯವಿಟ್ಟು ಇದಕ್ಕೆ ಎಲ್ಲರು ಸಹಕರಿಸಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.
PublicNext
04/12/2020 11:55 am