ನವದೆಹಲಿ- ನೂತನ ಸಂಸತ್ ಭವನ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಸಮ್ಮತಿ ಕೊಟ್ಟಿದೆ. ಡಿಸೆಂಬರ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಟ್ಟಡದ ಶಂಕು ಸ್ಥಾಪನೆ ಮಾಡಲಿದ್ದಾರೆ. ಒಟ್ಟು 971 ಕೋಟಿ ವೆಚ್ಚದಲ್ಲಿ ಸಂಸತ್ ಭವನ ನಿರ್ಮಾಣವಾಗಲಿದೆ.
ಆದ್ರೆ ಕಾಮಗಾರಿ ಆರಂಭಕ್ಕೂ ಮುನ್ನ ಪರಿಸರ ಇಲಾಖೆಯ ಅನುಮತಿ ಪಡೆದಿಲ್ಲ ಎಂದು ಆರೋಪಿಸಿ ಕೆಲವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ಜಸ್ಟೀಸ್ ಎ. ಎಂ ಕಾನ್ವಿಲ್ ಕರ್ ನೇತೃತ್ವದ ಪೀಠ ಕಾಮಗಾರಿಯ ಶಂಕು ಸ್ಥಾಪನಗೆ ಮಾತ್ರ ಅನುಮತಿ ನೀಡಿದೆ. ಇದಕ್ಕೆ ಕೆಲವು ಷರತ್ತುಗಳನ್ನೂ ವಿಧಿಸಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ತಾತ್ಕಾಲಿಕ ಹಿನ್ನಡೆ ಎದುರಾಗಿದೆ.
ಅರ್ಜಿಯ ವಿಚಾರಣೆ ನಡೆದು ಅಂತಿಮ ತೀರ್ಪು ಹೊರಬರುವವರೆಗೂ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳುವಂತಿಲ್ಲ ಎಂದು ಪೀಠ ಹೇಳಿದೆ.
PublicNext
07/12/2020 06:59 pm