ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಇಂದು ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿದೆ. ಈ ವೇಳೆ ಬಿಜೆಪಿ ಕಾರ್ಯಕರ್ತನೋರ್ವ ಮೃತಪಟ್ಟಿದ್ದಾನೆ. ಈ ಘಟನೆ ಬಿಜೆಪಿ ಕಾರ್ಯಕರ್ತರ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.
ಟಿಎಂಸಿ ಸರ್ಕಾರದ ದುರಾಡಳಿತವನ್ನು ವಿರೋಧಿಸಿ ಸಿಲಿಗುರಿಯಲ್ಲಿ ಬಿಜೆಪಿ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡಿತ್ತು. ಅದನ್ನು ಪೊಲೀಸರು ತಡೆದಿದ್ದಾರೆ ಎನ್ನಲಾಗಿದೆ. ಆದಾಗ್ಯೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯನ್ನು ಮುಂದುವರಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಏರ್ಪಟ್ಟಿದೆ. ಈ ವೇಳೆ ಉಲೇನ್ ರಾಯ್ ಎಂಬುವವರು ಮೃತಪಟ್ಟಿದ್ದಾರೆ.
PublicNext
07/12/2020 08:15 pm