ನವದೆಹಲಿ: ಅಯೋಧ್ಯೆ ರಾಮ ಜನ್ಮಭೂಮಿ ಮತ್ತು ಬಾಬ್ರಿ ಕಟ್ಟಡ ವಿವಾದ ಕಳೆದ ವರ್ಷ ಶಾಂತಿಯುತ ಅಂತ್ಯ ಕಂಡಿರುವ ಬೆನ್ನಲ್ಲೇ ಬಾಬ್ರಿ ಕಟ್ಟಡ ಧ್ವಂಸ ಪ್ರಕರಣದ ತೀರ್ಪು ಬುಧವಾರ (ಸೆ.30) ಹೊರಬಿದ್ದಿದ್ದು, ನ್ಯಾಯಾಲಯ ಎಲ್ಲ ಆರೋಪಿಗಳನ್ನು ಖುಲಾಷೆಗೊಳಿಸಿದೆ.
28 ವರ್ಷಗಳ ಬಳಿಕ ಲಖನೌದ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಸಿಬಿಐ ನ್ಯಾಯಾಧೀಶ ಸುರೇಂದ್ರ ಕುಮಾರ್ ಯಾದವ್ ಅವರು 2000 ಪುಟಗಳ ತೀರ್ಪು ಓದಿದರು. ಈ ವೇಳೆ ಕೋರ್ಟ್ ಹಾಲ್ನಲ್ಲಿ ವಕೀಲರು ಮತ್ತು 26 ಮಂದಿ ಆರೋಪಿಗಳನ್ನು ಬಿಟ್ಟು ಬೇರೆ ಯಾರಿಗೂ ಅವಕಾಶ ನೀಡಿರಲಿಲ್ಲ.
ಬಿಜೆಪಿಯ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ್ ಜೋಶಿ, ಉಮಾಭಾರತಿ, ಕಲ್ಯಾಣ್ ಸಿಂಗ್, ವಿನಯ್ ಕಟಿಯಾರ್, ಸಾಕ್ಷಿ ಮಹಾರಾಜ್ ಸೇರಿದಂತೆ 32 ಮಂದಿ ಹಾಜರು ಇರುವಂತೆ ಕೋರ್ಟ್ ಸೆ.16ರಂದು ಸೂಚನೆ ನೀಡಿತ್ತು. ಆದರೆ, ಉಮಾಭಾರತಿ ಅವರು ಕರೊನಾ ಪಾಸಿಟಿವ್ ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೋರ್ಟ್ನಿಂದ ವಿನಾಯಿತಿ ಕೋರಿದ್ದರು. ಅದೇ ವೇಳೆ ಎಲ್.ಕೆ.ಅಡ್ವಾಣಿ ಹಾಗೂ ಮುರುಳಿ ಮನೋಹರ್ ಜೋಶಿ ಅವರು ತಮ್ಮ ವಯಸ್ಸಿನ ಆಧಾರದ ಮೇಲೆ ಕೋರ್ಟ್ ಹಾಜರಿಯಿಂದ ವಿನಾಯಿತಿ ಕೇಳಿದ್ದಾರೆ.
ಆರೋಪಿ ಪಟ್ಟಿಯಲ್ಲಿರುವ ಇತರ ಮುಖಂಡರಾದ ಸಾಧ್ವಿ ರಿತಂಬರ್, ಸಾಕ್ಷಿ ಮಹಾರಾಜ್ ಮತ್ತು ಚಂಪತ್ ರಾಯ್ ಬನ್ಸಾಲ್ ಸೇರಿದಂತೆ 26 ಮಂದಿ ಆರೋಪಿಗಳು ಕೋರ್ಟ್ಗೆ ಹಾಜರಾಗಿದ್ದರು.
ಪ್ರಕರಣ ಸಂಬಂಧ ಸಿಬಿಐ 351 ಸಾಕ್ಷಿಗಳು ಮತ್ತು 600 ದಾಖಲೆಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಒಟ್ಟು 48 ಜನರ ವಿರುದ್ಧ ಆರೋಪಗಳನ್ನು ಹೊರಿಸಲಾಗಿದ್ದು, ಅದರಲ್ಲಿ 17 ಮಂದಿ ಈಗಾಗಲೇ ಸಾವನ್ನಪ್ಪಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ಸ್ಥಾಪಿಸಲಾಗಿರುವ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, ಬಿಜೆಪಿ ಮುಖಂಡ ವಿನಯ್ ಕಟಿಯಾರ್, ಸಾಧ್ವಿ ರಿತಂಬರಾ ಕೂಡ ಈ ಪ್ರಕರಣದ ಆರೋಪಿಗಳು.
ಆರೋಪ ಏನು?
ಅಯೋಧ್ಯೆ ರಾಮ ಜನ್ಮಭೂಮಿ ಪರಿಸರದಲ್ಲಿ 15ನೇ ಶತಮಾನದಲ್ಲಿ ನಿರ್ವಿುಸಲಾಗಿದ್ದ ಬಾಬ್ರಿ ಕಟ್ಟಡವನ್ನು 1992 ಡಿಸೆಂಬರ್ 6ರಂದು ಕೆಡವಲಾಗಿತ್ತು. ಆಡ್ವಾಣಿ, ಜೋಷಿ, ಉಮಾ ಭಾರತಿ ಇನ್ನಿತರ ಬಿಜೆಪಿ ನಾಯಕರು ಇದರ ಸಂಚು ರೂಪಿಸಿದ್ದರು ಎಂಬುದು ಆರೋಪ. ಈ ಘಟನೆ ಸಂದರ್ಭದಲ್ಲಿ ಉ.ಪ್ರದೇಶದಲ್ಲಿ ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ಮುಖ್ಯಮಂತ್ರಿಯಾಗಿದ್ದರು. ಅವರ ಸರ್ಕಾರ ಪರೋಕ್ಷವಾಗಿ ನೆರವು ನೀಡಿತ್ತು ಎಂಬ ಆರೋಪವೂ ಕೇಳಿ ಬಂದಿತ್ತು. ಈ ವೇಳೆ ಉಂಟಾದ ಗಲಭೆಯಲ್ಲಿ ದೇಶಾದ್ಯಂತ ಸು
PublicNext
30/09/2020 12:25 pm