ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಬಂಡೆ ಒಡೆದು ಜಲ್ಲಿ ಮಾಡಲು ಬಂದಿರುವ ಸಿಬಿಐ ಅಧಿಕಾರಿಗಳು - ಕೆಲವೇ ಕ್ಷಣಗಳಲ್ಲಿ ಸಿಬಿಐ ವಶಕ್ಕೆ ಡಿಕೆಶಿ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ನಿವಾಸದ ಮೇಲೆ ಸೋಮವಾರ ಬೆಳ್ಳಂಬೆಳಗ್ಗೆ ಸಿಬಿಐ ದಾಳಿ ನಡೆಸಿದೆ. ಈಗಾಗಲೇ FIR ದಾಖಲಿಸಿರುವ ಸಿಬಿಐ ಅಧಿಕಾರಿಗಳು ,50 ಲಕ್ಷ ವಶಪಡಿಕೊಂಡಿರುವ ಹಿನ್ನಲೆಯಲ್ಲಿ ಹೆಚ್ಚಿನ ವಿಚಾರಗೆ ಡಿ.ಕೆ ಶಿವಕುಮಾರನ್ನು ವಶಪಡಿಸಿಕೊಂಡು ಬಂಧಿಸುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ ,

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್ ಮತ್ತು ರಾಮನಗರದಲ್ಲಿರುವ ಅವರ ನಿವಾಸ, ಸ್ಥಳ ಸೇರಿ 15 ಕಡೆಗಳಲ್ಲಿ ಸಿಬಿಐ ದಾಳಿ ನಡೆಸಿದೆ.

ಅವರ ಸೋದರ ಸಂಸದ ಡಿ ಕೆ ಸುರೇಶ್ ಅವರ ನಿವಾಸದ ಮೇಲೆ ಕೂಡ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಸಿಗಬೇಕಿದೆ.

Edited By : Raghavendra K G
PublicNext

PublicNext

05/10/2020 11:14 am

Cinque Terre

98.64 K

Cinque Terre

19

ಸಂಬಂಧಿತ ಸುದ್ದಿ