ಹುಬ್ಬಳ್ಳಿ: ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಉದ್ಯಮಿಗಳು ಕೂಡ ಸರಕಾರದ ನಡೆ ವಿರುದ್ಧ ಆಕ್ರೋಶಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೈಟ್ ಕರ್ಫ್ಯೂ ಹಾಗೂ ಕೋವಿಡ್-19 ನಿಯಂತ್ರಣ ಕ್ರಮಗಳನ್ನು ಮರುಪರಿಶೀಲಿಸುವ ಸುಳಿವು ನೀಡಿದ್ದಾರೆ.
ರಾತ್ರಿ ಕರ್ಫ್ಯೂಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, "ನಾನು ಅವರೆಲ್ಲರನ್ನೂ ಗಮನಿಸುತ್ತಿದ್ದೇನೆ. ನಾಳೆ ಬೆಂಗಳೂರಿಗೆ ಹೋದ ನಂತರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ" ಎಂದಿದ್ದಾರೆ.
ಮತ್ತಷ್ಟು ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸುವ ನಿಯಂತ್ರಣ ಕ್ರಮಗಳ ಭಾಗವಾಗಿ ರಾಜ್ಯ ಸರ್ಕಾರ 10 ದಿನಗಳವರೆಗೆ ಘೋಷಿಸಿದ ನೈಟ್ ಕರ್ಫ್ಯೂ ಮಂಗಳವಾರ ರಾತ್ರಿಯಿಂದ ರಾಜ್ಯಾದ್ಯಂತ ಜಾರಿಗೆ ಬಂದಿದೆ. ಇದು ಜನವರಿ 7ರ ವರೆಗೆ ಪ್ರತಿದಿನ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ, ಈ ಸಮಯದಲ್ಲಿ ಯಾವುದೇ ಚಟುವಟಿಕೆಗಳನ್ನು ಅನುಮತಿಸಲಾಗುವುದಿಲ್ಲ.
PublicNext
29/12/2021 10:31 pm