ರಾಮನಗರ: ಪಾದಯಾತ್ರೆ ಬಗ್ಗೆ ಹೈಕೋರ್ಟ್ ಏನೇ ಹೇಳಲಿ. ನಾವು ಮಾತ್ರ ಪಾದಯಾತ್ರೆ ಮುಂದುವರೆಸುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಪಾದಯಾತ್ರೆ ಮುಂದುವರೆಸುವ ಅಚಲ ನಿರ್ಧಾರ ಪ್ರಕಟಿಸಿದ್ದಾರೆ.
ಇಂದು ಹೈಕೋರ್ಟ್ ನಲ್ಲಿ ಪಾದಯಾತ್ರೆಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ತುರ್ತು ವಿಚಾರಣೆ ನಡೆಸಿದ ವಿಭಾಗೀಯ ಪೀಠ ಕೆಪಿಸಿಸಿಗೆ ಪಾದಯಾತ್ರೆಯ ಔಚಿತ್ಯ ಪ್ರಶ್ನಿಸಿ ನೊಟೀಸ್ ಜಾರಿ ಮಾಡಿದೆ. ಈ ಬಗ್ಗೆ ಸಿದ್ದರಾಮಯ್ಯನವರಲ್ಲಿ ಪ್ರತಿಕ್ರಿಯೆ ಕೇಳಿದಾಗ ನಾವು ಜನರ ನೀರಿನ ಹಕ್ಕಿಗಾಗಿ ನಡೆಸುತ್ತಿರುವ ಹೋರಾಟವಿದು, ಪ್ರತಿದಿನ ಹೆಚ್ಚೆಚ್ಚು ಜನ ಭಾಗವಹಿಸುತ್ತಿದ್ದಾರೆ. ಜನರ ಉತ್ಸಾಹ ಹೆಚ್ಚಾಗುತ್ತಿದೆ. ಬಿಜೆಪಿ ಸರ್ಕಾರ ರಾಜ್ಯದ ಜನತೆಗೆ ಅನ್ಯಾಯ ಮಾಡುತ್ತಿದೆ ಎಂದು ಭಾವನೆಗಳ ಮೂಲಕ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿ ಸರ್ಕಾರ ಅನಗತ್ಯವಾಗಿ ಕುಡಿಯುವ ನೀರಿನ ಯೋಜನೆಯಲ್ಲಿ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದರು. ಸರ್ಕಾರದ ಬೇಜವಾಬ್ದಾರಿಯಿಂದ ಕೊರೋನಾ ಕೇಸು ಜಾಸ್ತಿಯಾಗ್ತಿದೆ, ನಮ್ಮಿಂದಾಗಿ ಅಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
PublicNext
12/01/2022 04:02 pm