ಬೆಂಗಳೂರು : ರಾಜ್ಯದಲ್ಲಿ ಅಕ್ಟೋಬರ್ 1 ರಿಂದ ಕೋವಿಡ್ ಪಾಸಿಟಿವಿಟಿ ದರ ಶೇ.1ಕ್ಕಿಂತ ಕಡಿಮೆ ಇರುವಂತ ಜಿಲ್ಲೆಗಳಲ್ಲಿ ಶೇ.100ರಷ್ಟು ಚಿತ್ರಮಂದಿರಗಳ ಭರ್ತಿಗೆ ಅವಕಾಶ ನೀಡಲಾಗುತ್ತಿದೆ. ಅಕ್ಟೋಬರ್ 3 ರಿಂದ ಪಬ್ ಗಳನ್ನು ತೆರೆಯೋದಕ್ಕೆ ಅವಕಾಶ ನೀಡಲಾಗುತ್ತಿದೆ. 6 ರಿಂದ 12ನೇ ತರಗತಿಗಳನ್ನು ಶೇ.100 ಆರಂಭಿಸದೋಕ್ಕೂ ಅವಕಾಶ ನೀಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತಂತೆ ಇಂದು ನಡೆದಂತ ಕೋವಿಡ್ ನಿಯಂತ್ರಣ ಸಭೆಯ ಬಳಿಕ ಮಾತನಾಡಿದಂತ ಅವರು, ರಾಜ್ಯದಲ್ಲಿ ಪ್ರಸ್ತುತ ಸರಾಸರಿ ಪಾಸಿಟಿವಿಟಿ ದರ ಶೇ.0.66 ಇದೆ. ಅಕ್ಟೋಬರ್ 1ರಿಂದ ಕೋವಿಡ್ ಪಾಸಿಟಿವಿಟಿ ದರ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶೇ.100ರಷ್ಟು ಸೀಟುಗಳ ಭರ್ತಿಗೆ ಅವಕಾಶ ನೀಡಲಾಗುವುದು. ಶೇ.1ಕ್ಕಿಂತ ಹೆಚ್ಚಾದರೆ ಶೇ.50ರಷ್ಟು ಭರ್ತಿಗೆ ಹಾಗೂ ಶೇ.2ಕ್ಕಿಂತ ಹೆಚ್ಚಾದರೆ ಚಿತ್ರಮಂದಿರ ಬಂದ್ ಮಾಡಲಾಗುವುದು. ಪಬ್ ಗಳಿಗೂ ಇದೇ ಮಾನದಂಡ ಅನುಸರಿಸಲಾಗುವುದು ಎಂದರು.
ಇನ್ನು ಚಿತ್ರಮಂದಿರಗಳ ಪ್ರವೇಶಕ್ಕೆ ಕನಿಷ್ಠ ಒಂದು ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಪ್ರವೇಶ. ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳಿಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
PublicNext
24/09/2021 06:43 pm