ನವದೆಹಲಿ: ಬಿಜೆಪಿ ನಾಯಕಿ ಉಮಾ ಭಾರತಿ ಅವರಿಗೆ ಕೊವಿಡ್-19ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ವಿಚಾರವನ್ನು ಸ್ವತಃ ಉಮಾಭಾರತಿ ಅವರೇ ಟ್ವೀಟ್ ಮೂಲಕ ಬಹಿರಂಗಪಡಿಸಿದ್ದು 'ನಾನು ವಂದೇ ಮಾತರಂ ಕುಂಜ್ ನಲ್ಲಿ ಕ್ವಾರಂಟೈನ್ ನಲ್ಲಿದ್ದೇನೆ. ಹರಿದ್ವಾರ ಹಾಗೂ ಋಷಿಕೇಶದ ನಡುವೆ ಇರುವ ತಾಣ ಇದಾಗಿದೆ. ಇನ್ನು ನಾಲ್ಕು ದಿನಗಳ ನಂತರ ಮತ್ತೊಮ್ಮೆ ಕೊವಿಡ್-19 ಪರೀಕ್ಷೆಗೆ ಒಳಪಡುತ್ತೇನೆ. ಪರಿಸ್ಥಿತಿ ಹೀಗೆ ಮುಂದುವರೆದರೆ ವೈದ್ಯರ ಸಲಹೆಯಂತೆ ಮುಂದುವರೆಯುತ್ತೇನೆ, ಕಳೆದ 10 ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ' ಎಂದು ಟ್ವೀಟ್ ಮಾಡಿದ್ದಾರೆ.
ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
PublicNext
28/09/2020 09:13 am