ಶಿವಮೊಗ್ಗ: ಹಿಜಾಬ್ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ 13 ವಿದ್ಯಾರ್ಥಿನಿಯರು ಪೂರಕ ಪರೀಕ್ಷೆ ಬಹಿಷ್ಕರಿಸಿ ಮನೆಗೆ ತೆರಳಿದ್ದಾರೆ.
ಶಿವಮೊಗ್ಗದ ಮೇನ್ ಮಿಡ್ಲ್ ಶಾಲೆಯಲ್ಲಿ ಈ ಘಟನೆ ನಡೆದಿದೆ. ಹೈಕೋರ್ಟ್ ಆದೇಶವನ್ನು ನೀವು ಪಾಲಿಸಲೇಬೇಕು ಎಂದು ಶಾಲೆಯ ಆಡಳಿತ ಮಂಡಳಿ ಹೇಳಿದೆ. ಇದಕ್ಕೆ ಒಪ್ಪದ ವಿದ್ಯಾರ್ಥಿನಿಯರು ಹಿಜಾಬ್ ನಮಗೆ ಪರೀಕ್ಷೆಗಿಂತ ಧರ್ಮಾಚರಣೆಯೇ ಮುಖ್ಯ ಎಂದು ಪರೀಕ್ಷೆ ಬಹಿಷ್ಕರಿಸಿ ಮನೆಗೆ ತೆರಳಿದ್ದಾರೆ.
PublicNext
14/02/2022 05:15 pm