ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಜಾಬ್ ದಳ್ಳುರಿ : ಪಬ್ಲಿಕ್ ನೆಕ್ಸ್ಟ್ ಮೂಲಕ ಸಿಎಂ ಮನವಿ

ಬೆಂಗಳೂರು : ರಾಜ್ಯಾದ್ಯಂತ ಸಮವಸ್ತ್ರದ ಸಮರ ಮುಂದುವರೆದಿದೆ. ಹಿಜಾಬ್ ವಿರುದ್ಧ ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿರುವ ವಿದ್ಯಾರ್ಥಿಗಳಿಂದ ಹೊತ್ತಿದ ಕಿಡಿ ಇಂದು ಜ್ವಾಲೆಯಾಗಿದೆ.

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠ ಚಾರ್ಜ್ ಕೂಡಾ ಮಾಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ನಾಳೆಯಿಂದ 3 ದಿನಗಳ ಕಾಲ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಸಹ ಘೋಷಿಸಿದ್ದಾರೆ.

ವಿದ್ಯಾರ್ಥಿಗಳು ಶಾಂತಿಯಿಂದ ವರ್ತಿಸುವಂತೆ ಪಬ್ಲಿಕ್ ನೆಕ್ಸ್ಟ್ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಅವರು ಮನವಿ ಸಹ ಮಾಡಿದ್ದಾರೆ.

ಸಿಎಂ ಮನವಿ ಹೀಗಿದೆ ನೋಡಿ

ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ.

ಒಟ್ಟಿನಲ್ಲಿ ಉದ್ರುಕ್ತ ವಿದ್ಯಾರ್ಥಿಗಳ ದಳ್ಳುರಿ ಎಲ್ಲಿಗೆ ಹೋಗಿ ತಲುಪುತ್ತದೆಯೋ ತಿಳಿಯದಂತ್ತಾಗಿದೆ.

Edited By : Nirmala Aralikatti
PublicNext

PublicNext

08/02/2022 09:12 pm

Cinque Terre

70.89 K

Cinque Terre

6

ಸಂಬಂಧಿತ ಸುದ್ದಿ