ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: 'ರಾಜ್ಯ ಸರ್ಕಾರದ ಪಠ್ಯ‌ ಪುಸ್ತಕದಲ್ಲಿ ಸ್ತ್ರೀಯರಿಗೆ ಅವಮಾನ'

ಪುತ್ತೂರು: ರಾಜ್ಯ ಸರ್ಕಾರವು ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ವಿತರಿಸಲು ಸಂಪೂರ್ಣ ವಿಫಲವಾಗಿದೆ. ಅಷ್ಟೇ ಅಲ್ಲದೆ ಪಠ್ಯ ಪುಸ್ತಕದಲ್ಲಿ ಸ್ತ್ರೀಯರಿಗೆ ಅನ್ಯಾಯ ಮಾಡಲಾಗಿದೆ ಎಂದು ಸ್ಥಳೀಯ ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಚಿಲ್ತಡ್ಕ ಆರೋಪಿಸಿದ್ದಾರೆ.

ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, 'ರೋಹಿತ್ ಚಕ್ರವರ್ತಿಯಂತಹ ವ್ಯಕ್ತಿಯನ್ನು ಪಠ್ಯ ಪರಿಷ್ಕರಣ ಸಮಿತಿ ಅಧ್ಯಕ್ಷನನ್ನಾಗಿ ಮಾಡಿರುವ ಬಿಜೆಪಿ ಸರ್ಕಾರವು ಆರ್‌ಎಸ್‌ಎಸ್‌ನ ಸಿದ್ಧಾಂತಗಳನ್ನು ವಿದ್ಯಾರ್ಥಿಗಳ ತಲೆಗೆ ತುಂಬಿಸುವ ಕೆಲಸವನ್ನು ಮಾಡುತ್ತಿದೆ. ಪಠ್ಯ ಪುಸ್ತಕ ಸಮಿತಿಯ ಈ ಗೊಂದಲದಿಂದಾಗಿ ವಿದ್ಯಾರ್ಥಿಗಳಿಗೆ ಪಾಠ ಪುಸ್ತಕವನ್ನೇ ನೀಡಲಾಗಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳ ಪಾಠ, ಪ್ರವಚನಕ್ಕೆ ತೊಂದರೆಯಾಗುತ್ತಿದೆ ಎಂದು ಅಸಮಾಧಾನ ಹೊರ ಹಾಕಿದರು.

ಹೆಸರಾಂತ ಸಾಹಿತಿಗಳ‌ ಪಠ್ಯಗಳನ್ನು ಪಠ್ಯದಿಂದ ತೆಗೆಯುವ ಮೂಲಕ ಸಾಹಿತಿಗಳಿಗೆ ಅವಮಾನ ಮಾಡಲಾಗಿದೆ. ಇದೇ ಕಾರಣಕ್ಕಾಗಿ ಸಾಹಿತಿಗಳು ಇದೀಗ ತಮ್ಮ ಪಠ್ಯಗಳನ್ನು ಹಿಂದಕ್ಕೆ ಪಡೆಯುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ. ಸರಕಾರದ ಈ ನೀತಿಯನ್ನು ವಿರೋಧಿಸಿ ನಾಳೆ ಕಾಂಗ್ರೆಸ್‌ ಪಕ್ಷದಿಂದ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯೂ ನಡೆಯಲಿದೆ ಎಂದರು.

Edited By : Somashekar
PublicNext

PublicNext

08/06/2022 12:24 pm

Cinque Terre

91.25 K

Cinque Terre

9