ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕನಕಪುರ ಬಂಡೆಗೆ ತಪ್ಪದ ಸಂಕಷ್ಟ : FIR ದಾಖಲಿಸಿದ CBI

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ಅಧಿಕಾರಿಗಳು ಎಫ್ ಐ ಆರ್ ದಾಖಲಿಸಿದ್ದಾರೆ.

ಇಂದು ಬೆಳ್ಳಂಬೆಳಗ್ಗೆ ಡಿಕೆಶಿ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಇದೀಗ ಬೆಂಗಳೂರಿನ ಸಿಸಿಬಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷನ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪದ ಮೇಲೆ ಈ ಎಫ್ ಐ ಆರ್ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸದಾಶಿವನಗರದಲ್ಲಿರುವ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಇಂದು ಐವರು ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಇಂದು ಬೆಳಗ್ಗೆ 8 ಗಂಟೆಗೆ ಸಿಬಿಐ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿದ್ದು, ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಲ್ಲದೆ ಡಿಕೆಶಿಗೆ ಸೇರಿದ ಹಲವು ಕಡೆಗಳಲ್ಲಿ ಕೂಡ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ 3ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ ಡಿಕೆಶಿ ಜೈಲು ಸೇರಿದ್ದರು.

ಇದೀಗ ಒಂದು ವರ್ಷ ಕಳೆಯುವ ಬೆನ್ನಲ್ಲೇ ಮತ್ತೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಮನೆಯ ಮೇಲೂ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ಅವರ ಮನೆಯಲ್ಲೂ ಶೋಧಕಾರ್ಯ ನಡೆಸುತ್ತಿದ್ದಾರೆ.

Edited By : Nirmala Aralikatti
PublicNext

PublicNext

05/10/2020 10:47 am

Cinque Terre

87.41 K

Cinque Terre

12

ಸಂಬಂಧಿತ ಸುದ್ದಿ