ಪಣಜಿ: ಒಮಿಕ್ರಾನ್ ಹರಡುವಿಕೆ ಭೀತಿಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ವಿವಿಧ ರಾಜ್ಯ ಸರ್ಕಾರಗಳು ನಿಷೇಧ ಹೇರಿವೆ. ಹಾಗೂ ಡಿಸೆಂಬರ್ ತಿಂಗಳಾಂತ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿವೆ. ಆದರೆ ಗೋವಾ ರಾಜ್ಯದಲ್ಲಿ ಇದ್ಯಾವುದೂ ಇಲ್ಲ!
ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, "ರಾಜ್ಯದಲ್ಲಿ ನೈಟ್ ಕರ್ಫ್ಯೂ ಸೇರಿದಂತೆ ಯಾವುದೇ ನಿಯಮಗಳನ್ನು ಜಾರಿಗೊಳಿಸುವುದಿಲ್ಲ" ಎಂದು ಸ್ಪಷ್ಟಪಡಿಸಿದರು.
"ಡಿಸೆಂಬರ್ 31ರಂದು ರಾಜ್ಯದಲ್ಲಿ ಪಾರ್ಟಿ, ಕಾರ್ಯಕ್ರಮಗಳನ್ನು ಮಾಡಲು ಅವಕಾಶ ನೀಡಲಾಗಿದೆ. ಆದರೆ ಇದಕ್ಕೆ ಆಗಮಿಸುವ ಅತಿಥಿಗಳು ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಅಥವ ಎರಡು ಡೋಸ್ ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿರಬೇಕು" ಎಂದು ಸಾವಂತ್ ಹೇಳಿದದರು.
PublicNext
29/12/2021 07:12 pm