ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಐಪಿಎಸ್ ಅಧಿಕಾರಿ ರವಿ ಚನ್ನಣ್ಣವರ್ ವರ್ಗಾವಣೆ ಆದೇಶಕ್ಕೆ ತಡೆ

ಬೆಂಗಳೂರು: ಸಿಐಡಿ ಎಸ್.ಪಿ ಆಗಿದ್ದ ಐಪಿಎಸ್ ಅಧಿಕಾರಿ ರವಿ ಚನ್ನಣ್ಣವರ್ ಅವರನ್ನ ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಲಾಗಿತ್ತು. ಸದ್ಯ ಈ ಆದೇಶವನ್ನು ತಡೆಹಿಡಿಯಲಾಗಿದೆ.

ನಿನ್ನೆಯಷ್ಟೇ ಒಂಬತ್ತು ಐಪಿಎಸ್ ಅಧಿಕಾರಿಗಳನ್ನು ಬೇರೆ ಹುದ್ದೆಗಳಿಗೆ ನಿಯುಕ್ತಿಗೊಳಿಸಿ ವರ್ಗಾವಣೆ ಮಾಡಲಾಗಿತ್ತು. ಇದರಲ್ಲಿ ರವಿ ಡಿ ಚನ್ನಣ್ಣನವರ್ ಹೆಸರು ಕೂಡ ಇತ್ತು. ಸಿಐಡಿಯಿಂದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಲಾಗಿತ್ತು.

ಆದ್ರೆ, ಇದೀಗ ಕರ್ನಾಟಕ ಸರ್ಕಾರ ಏಕಾಏಕಿ ರವಿ ಚನ್ನಣ್ಣನವರ್ ಅವರ ವರ್ಗಾವಣೆ ಆದೇಶನ್ನು ತಡೆ ಹಿಡಿಯಲಾಗಿದೆ ಎಂದು ಸುತ್ತೋಲೆ ಹೊರಡಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರವಿ ಚನ್ನಣ್ಣವರ್ ವರ್ಗಾವಣೆಗೆ ಸರ್ಕಾರ ಬ್ರೇಕ್ ಹಾಕಿದೆ.

Edited By : Nagaraj Tulugeri
PublicNext

PublicNext

28/01/2022 10:54 pm

Cinque Terre

100.27 K

Cinque Terre

12