ಶಿವಮೊಗ್ಗ ದುರಂತದ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಘಟನೆಯಲ್ಲಿ ಸ್ಫೋಟಕ ವಸ್ತುಗಳ ಮಾರಾಟ ಹಾಗೂ ಬಳಕೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಬಳಿಕ ಮಾತನಾಡಿದ ಅವರು, ದುರಂತದ ಕುರಿತು ಎಲ್ಲಾ ಆಯಾಮಾದಲ್ಲೂ ತನಿಖೆ ಮುಂದುವರಿದಿದೆ. ಇಲ್ಲಿ ಕ್ರಷರ್‌ಗಳಿಗೆ ಅನುಮತಿ ಇದೆ. ಯಾರಿಗೂ ಕಲ್ಲು ಗಣಿಗಾರಿಕೆಗೆ ಅನುಮತಿ ಇಲ್ಲ. ಇದು ಎಕೋ ಸೆಸ್ಸಿಟಿವ್ ಜೋನ್ ಆಗಿರುವುದು ಮರುಪರೀಶೀಲನೆಗೆ ಸರ್ಕಾರ ದೂರು ಬಂದಿದೆ. ಸರ್ಕಾರ ಮರುಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದರು.
ಸಮಗ್ರ ತನಿಖೆ ನಂತರ ಸತ್ಯ ಗೊತ್ತಾಗಲಿದೆ. ಘಟನೆಯಲ್ಲಿ ಮೃತಪಟ್ಟವರನ್ನು ಹೊರತುಪಡಿಸಿ ಬೇರೆ ಯಾರು ಇರಲಿಲ್ಲ. ತನಿಖೆಯಿಂದಲೇ ಎಲ್ಲಾ ಮಾಹಿತಿ ಸ್ಪಷ್ಟವಾಗಬೇಕು. ತನಿಖೆ ನಡೆಯುತ್ತಿರುವಾಗ ಈ ಬಗ್ಗೆ ಮಾತಾನಾಡಿದ್ರೆ ತನಿಖೆಗೆ ಅಡ್ಡಿಪಡಿಸಿದಂತೆ ಆಗುತ್ತದೆ. ಇನ್ನು ಅಪರಾಧಿಗಳು ಯಾರೇ ಆಗಿದ್ದರೂ ಶಿಕ್ಷೆ ಅನುಭವಿಸಬೇಕು. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
PublicNext
23/01/2021 05:29 pm