ಬೆಂಗಳೂರು: ನಗರದ ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗುರುವಾರ ಬೆಳ್ಳಂಬೆಳಿಗ್ಗೆ 6 ಗಂಟೆಗೆ ಜಮೀರ್ ಗೆ ಶಾಕ್ ನೀಡಿದ್ದಾರೆ. ಮಹತ್ವದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮನೆ, ಫ್ಲ್ಯಾಟ್, ಹಾಗೂ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆಯೂ ಏಕಕಾಲಕ್ಕೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಂಗಳೂರು ನಗರ ಹಾಗೂ ಬೆಂಗಳೂರು ಹೊರವಲಯದಲ್ಲಿ ಇರುವ ಜಮೀರ್ ಅಹ್ಮದ್ ಗೆ ಸೇರಿರುವ ಆಸ್ತಿಗಳ ಬಗ್ಗೆ ಹಾಗೂ ಮನೆಯಲ್ಲಿರುವ ದುಬಾರಿ ವಸ್ತುಗಳ ಕುರಿತಾದ ದಾಖಲೆಗಳನ್ನು ಅಧಿಕಾರಿಗಳು ಕಲೆ ಹಾಕಿದ್ದಾರೆ. ಸಾಕಷ್ಟು ಪೂರ್ವ ತಯಾರಿ ಮಾಡಿಕೊಂಡೇ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಜಮೀರ್ ಅಹ್ಮದ್ ಓರ್ವ ಪ್ರಭಾವಿ ರಾಜಕಾರಣಿ. ಹೀಗಾಗಿ ದಾಳಿ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಮೀರ್ ಮನೆ ಸುತ್ತ ಭಾರಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.
PublicNext
05/08/2021 08:05 am