ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಖಾಕಿ ಪಡೆಗೆ ಸಿಎಂ ಬೊಮ್ಮಾಯಿ ಖಡಕ್​ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಕೋಮು ಆಧರಿತ ಅಪರಾಧ ಕೃತ್ಯಗಳನ್ನು ನಿಯಂತ್ರಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೊಲೀಸರಿಗೆ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಬೊಮ್ಮಾಯಿ ಅವರು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಐಜಿ, ಎಸ್.ಪಿ, ಹಾಗೂ ಪೊಲೀಸ್ ಆಯುಕ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಈ ವೇಳೆ ಸಿಎಂ, ಕಾನೂನು ಸುವ್ಯವಸ್ಥೆಗೆ ಭಂಗವಾಗದಂತೆ ಕಟ್ಟೆಚ್ಚರ ವಹಿಸಬೇಕು. ಶಾಂತಿ ಕಾಪಾಡುವ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಗಿದೆ. ಗಲಭೆಗೆ ಅವಕಾಶ ನೀಡಬಾರದು, ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಡಿಜಿ ಮತ್ತು ಡಿಐಜಿ ಪ್ರವೀಣ್ ಸೂದ್, ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಎಲ್ಲಾ ಐಜಿಪಿ, ಎಸ್‌ಪಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿ ಚರ್ಚೆ ಮಾಡಿದ್ದಾರೆ. ಧರ್ಮ ವಿಚಾರದಲ್ಲಿ ಏನೇ ಸಂಘರ್ಷ ಆದ್ರೂ ನೀವೆ ಹೊಣೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಠಿಣ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ್ದಾರೆ.

Edited By : Vijay Kumar
PublicNext

PublicNext

11/04/2022 09:44 pm

Cinque Terre

72.71 K

Cinque Terre

15

ಸಂಬಂಧಿತ ಸುದ್ದಿ