ನವದೆಹಲಿ: ಭಯೋತ್ಪಾದನೆಯು ಮಾನವ ಹಕ್ಕುಗಳ ಉಲ್ಲಂಘನೆಯ ಅತಿದೊಡ್ಡ ರೂಪ. ಮಾನವ ಹಕ್ಕುಗಳನ್ನು ರಕ್ಷಿಸಲು ಭಯೋತ್ಪಾದನೆ ಎಂಬ ಪಿಡುಗನ್ನು ಓಡಿಸಲೇಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯ 13ನೇ ಸಂಸ್ಥಾಪನಾ ದಿನವನ್ನುದ್ದೇಶಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ಸರ್ಕಾರವು ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣು ನೀತಿಯನ್ನು ಅಳವಡಿಸಿಕೊಂಡಿದೆ. ಭಾರತದಿಂದ ಭಯೋತ್ಪಾದನೆ ಬೆದರಿಕೆಯನ್ನು ಬೇರುಸಹಿತ ಕಿತ್ತೊಗೆಯಲು ಕೆಲಸ ಮಾಡುತ್ತಿದೆ. ಭಯೋತ್ಪಾದನೆಗಿಂತ ದೊಡ್ಡ ಮಾನವ ಹಕ್ಕುಗಳ ಉಲ್ಲಂಘನೆ ಇರಲಾರದು ಎಂದು ನಾನು ನಂಬುತ್ತೇನೆ. ಎನ್‌ಐಎ ದಾಖಲಿಸಿರುವ ಜಮ್ಮು ಮತ್ತು ಕಾಶ್ಮೀರದ ಭಯೋತ್ಪಾದಕ ನಿಧಿ ಪ್ರಕರಣಗಳ ಕಾರಣ, ಅಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಹಣವನ್ನು ಒದಗಿಸುವುದು ಈಗ ತುಂಬಾ ಕಷ್ಟಕರವಾಗಿದೆ. ಮಾನವ ಹಕ್ಕುಗಳನ್ನು ರಕ್ಷಿಸಲು ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯುವುದು ಅತ್ಯಗತ್ಯ ಎಂದರು.
PublicNext
21/04/2022 04:44 pm