ಬೆಂಗಳೂರು: ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಸಮನ್ಸ್ ತಲುಪಿಸುವಲ್ಲಿ ಅಧಿಕಾರಿಗಳು ಫೇಲ್ ಆಗಿದ್ದಾರೆ. 2012ರ ಭೂ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಯಡಿಯೂರಪ್ಪ ಅವರಿಗೆ ಸಮನ್ಸ್ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಸಂಸದರು ಮತ್ತು ಶಾಸಕರ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯಕ್ಕೆ ಅಧಿಕಾರಿಗಳು ತಿಳಿಸಿದ್ದಾರೆ.
ಏಪ್ರಿಲ್ 8, 13 ಮತ್ತು 16ನೇ ತಾರೀಖಿನಂದು ತಾವು ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿದ್ದೆವು, ಆದರೆ ಯಡಿಯೂರಪ್ಪ ಅವರು ರಾಜ್ಯ ಪ್ರವಾಸದಲ್ಲಿರುವ ಕಾರಣ ಸಮನ್ಸ್ ನೀಡಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ದೂರವಾಣಿ ಮೂಲಕ ಅಧಿಕಾರಿಗಳು ಯಡಿಯೂರಪ್ಪ ಅವರನ್ನು ಏಕೆ ಸಂಪರ್ಕಿಸಲಿಲ್ಲ ಎಂಬುದು ನಿಗೂಢವಾಗಿದೆ.
PublicNext
21/04/2022 07:59 pm