ಬೆಂಗಳೂರು: ದೇಶದ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಚುನಾವಣೆ ಘೋಷಣೆ ಮಾಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ವತಿಯಿಂದ ಮನವಿ ಸಲ್ಲಿಸಲಾಯಿತು.
ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಮನವಿ ಸಲ್ಲಿಸಿತು. ಶಾಸಕರಾದ ರಿಜ್ವಾನ್ ಆಹ್ಮದ್, ವಿಧಾನ ಪರಿಷತ್ ಸದಸ್ಯರಾದ ಯು.ಬಿ. ವೆಂಕಟೇಶ್, ಪಿ.ಆರ್.ರಮೇಶ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಮಾಜಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಮುಖಂಡರಾದ ಎಮ್.ಶಿವರಾಜು, ಅಬ್ದುಲ್ ವಾಜಿದ್, ರಿಜ್ವಾನ್ ನವಾಬ್, ಸತ್ಯನಾರಾಯಣ್ ಹಾಗೂ ಮಾಜಿ ಮಹಾನಗರ ಪಾಲಿಕೆ ಸದಸ್ಯ ಮೋಹನ್ ಕುಮಾರ್, ಬೆಂಗಳೂರು ನಗರ ಕಾಂಗ್ರೆಸ್ ಜಿಲ್ಲಾಧ್ಯಕ್ಷರುಗಳಾದ ರಾಜ್ ಕುಮಾರ್, ಶೇಖರ್, ಜಿ.ಕೃಷ್ಣಪ್ಪ ಮನವಿ ಸಲ್ಲಿಸಿದರು. ಈ ಸಂದರ್ಭ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಜೊತೆ ನಮ್ಮ ಪ್ರತಿನಿಧಿ ಪ್ರವೀಣ್ ರಾವ್ ನಡೆಸಿದ ಚಿಟ್ ಚಾಟ್ ಇಲ್ಲಿದೆ...
PublicNext
14/05/2022 02:02 pm