ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲ್ಲು ತೂರಿದ ಯಾರನ್ನೂ ಬಿಡಬೇಡಿ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಖಾಕಿಗೆ ಯೋಗಿ ತಾಕೀತು

ಲಕ್ನೋ: ದೇಶಾದ್ಯಂತ ಭುಗಿಲೆದ್ದಿರುವ ಮುಸ್ಲಿಮರ ಪ್ರತಿಭಟನೆ ಒಂದೆಡೆಯಾದರೆ, ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ, ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಇಟ್ಟ ಪ್ರಕರಣಗಳು, ಬಿಜೆಪಿ ಸರ್ಕಾರವನ್ನು ಕಂಗೆಡಿಸಿದೆ. ಈ ಆಕ್ರೋಶಗೊಂಡಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹಿರಿಯ ಅಧಿಕಾರಿಗಳೊಂದಿಗೆ ತುರ್ತಾಗಿ ಉನ್ನತ ಮಟ್ಟದ ಸಭೆ ನಡೆಸಿದ್ದು, 'ಕಲ್ಲು ತೂರಿದ ಯಾರನ್ನೂ ಬಿಡಬೇಡಿ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ' ಎಂದು ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ ಎನ್ನಲಾಗಿದೆ.

'ಸಮಾಜಘಾತುಕರನ್ನು ಕಟ್ಟುನಿಟ್ಟಾಗಿ ಎದುರಿಸಲು ಅಧಿಕಾರಿಗಳಿಗೆ ಸರ್ಕಾರ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ ಎಂದು ಹೇಳಲಾಗುತ್ತಿದೆ. ಕಾನೂನನ್ನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಪಾಠ ಕಲಿಸಲಾಗುವುದು' ಎಂದು ಯೋಗಿ ಆದಿತ್ಯನಾಥ್ ಅವರು ಪೊಲೀಸರಿಗೆ ತಾಕೀತು ಮಾಡಿದ್ದಾರೆ. ಏತನ್ಮಧ್ಯೆ, ಆಡಳಿತವು ಸಹರಾನ್‌ಪುರದಲ್ಲಿ 45, ಹತ್ರಾಸ್‌ನಲ್ಲಿ 24, ಅಂಬೇಡ್ಕರ್ ನಗರದಲ್ಲಿ 23, ಪ್ರಯಾಗ್‌ರಾಜ್‌ನಲ್ಲಿ 22, ಮೊರಾದಾಬಾದ್‌ನಲ್ಲಿ 7 ಮತ್ತು ಫಿರೋಜಾಬಾದ್‌ನಲ್ಲಿ ಇಬ್ಬರನ್ನು ಜನರನ್ನು ಬಂಧಿಸಿದೆ.

ಉತ್ತರ ಪ್ರದೇಶದ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಅವಸ್ಥಿ ಅವರೇ ಖುದ್ದಾಗಿ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಕುಳಿತು ಇಡೀ ರಾಜ್ಯದ ಕಾನೂನು ಸುವ್ಯವಸ್ಥೆಯ ಕುರಿತಾಗಿ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ. ಉತ್ತರ ಪ್ರದೇಶದ ಪ್ರಭಾರಿ ಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿರುವ ಅವಸ್ಥಿ, ಉತ್ತರ ಪ್ರದೇಶದ ಎಲ್ಲಾ ರಾಜ್ಯಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಸಂಬಂಧಪಟ್ಟ ಜಿಲ್ಲೆಗಳ ಕಾನೂನು ಸುವ್ಯವಸ್ಥೆ ಕುರಿತಾಗಿ ಕ್ಷಣ ಕ್ಷಣದ ಮಾಹಿತಿ ನೀಡುವಂತೆ ತಾಕೀತು ಮಾಡಿದ್ದಾರೆ.

Edited By : Vijay Kumar
PublicNext

PublicNext

11/06/2022 07:03 am

Cinque Terre

74.35 K

Cinque Terre

37

ಸಂಬಂಧಿತ ಸುದ್ದಿ