ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನ್ಯಾಷನಲ್‌ ಹೆರಾಲ್ಡ್‌ ಕೇಸ್‌: ಇಂದು ಸೋನಿಯಾ ಗಾಂಧಿ ಇಡಿ ವಿಚಾರಣೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಬೆಳಗ್ಗೆ 11 ಗಂಟೆಗೆ ದೆಹಲಿ ಇಡಿ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಲು ಮುಂದಾಗಿದೆ.

ಭಾರತದ ಯಾವುದೇ ಫೆಡರಲ್ ತನಿಖಾ ಸಂಸ್ಥೆ ಕಾಂಗ್ರೆಸ್ ಅಧ್ಯಕ್ಷರನ್ನು ಪ್ರಶ್ನಿಸುತ್ತಿರುವುದು ಇದೇ ಮೊದಲು. ಕೆಲವು ದಿನಗಳ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನೂ ಈ ಪ್ರಕರಣದಲ್ಲಿ ಇಡಿ ಸುದೀರ್ಘ ವಿಚಾರಣೆ ನಡೆಸಿತ್ತು. ದೆಹಲಿಯಲ್ಲಿರುವ ಇಡಿ ಪ್ರಧಾನ ಕಚೇರಿಯಲ್ಲಿ ರಾಹುಲ್ ಗಾಂಧಿ ಅವರನ್ನು ಐದು ದಿನಗಳಲ್ಲಿ 50 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಅದನ್ನು ವಿರೋಧಿಸಿ ಭಾರತದಾದ್ಯಂತ ಭಾರೀ ಪ್ರತಿಭಟನೆಗಳು ನಡೆದಿದ್ದವು.

ಸೋನಿಯಾಗಾಂಧಿ ಅವರಿಗೂ ವಿಚಾರಣೆ ಬರುವಂತೆ 2 ಬಾರಿ ಸಮನ್ಸ್ ನೀಡಲಾಗಿತ್ತು. ಆದರೆ ಕೋವಿಡ್ ಸೇರಿದಂತೆ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹಿನ್ನೆಲೆ ವಿಚಾರಣೆ ಮುಂದೂಡಲು ಸೋನಿಯಾಗಾಂಧಿ ಮನವಿ ಮಾಡಿದ್ದರು. ಇದಕ್ಕೆ ಸಹಕರಿಸಿದ್ದ ಅಧಿಕಾರಿಗಳು ಇಂದಿಗೆ ದಿನಾಂಕ ನಿಗದಿ ಮಾಡಿದ್ದರು.

Edited By : Vijay Kumar
PublicNext

PublicNext

21/07/2022 09:10 am

Cinque Terre

44.31 K

Cinque Terre

2

ಸಂಬಂಧಿತ ಸುದ್ದಿ