ಬೆಂಗಳೂರು: ಡಿ.ಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗಳಿಂದ ಹಿಡಿದು, ಇತ್ತೀಚಿಗಿನ ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಯಂತಹ ಘಟನೆಗಳ ಹಿನ್ನೆಲೆಯಲ್ಲಿ, ಎಸ್‌ಡಿಪಿಐ ಹಾಗೂ ಕೋಮು ಸಂಘಟನೆಗಳ ಮೇಲೆ ನಿಷೇಧ ಹೇರಬೇಕು ಎಂಬ ಬೇಡಿಕೆಯೊಂದಿಗೆ, ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸದ್ಯ ಅವರ ಬೇಡಿಕೆಯಂತೆ ಎಸ್‌ಡಿಪಿಐ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಕ್ರಮ ಸರಕಾರ ಯೋಚನೆ ನಡೆಸುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ನಾನು ಅವರ ಭಾವನೆಗಳನ್ನು ಅರ್ಥ ಮಾಡಿಕೊಂಡಿದ್ದೇನೆ, ಹಾಗೂ ಸರಕಾರವೂ ಆ ನಿಟ್ಟಿನಲ್ಲಿ ಯೋಚಿಸುತ್ತಿದೆ ಎಂದು ಹೇಳಿದ್ದಾರೆ. ಮನೆಯಲ್ಲಿ ನನ್ನನ್ನು ಭೇಟಿಯಾಗಲು ಬಂದಿದ್ದ ಎಬಿವಿಪಿ ಕಾರ್ಯಕರ್ತರು, ನನ್ನ ಅನುಪಸ್ಥಿತಿಯಲ್ಲಿ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಎಬಿವಿಪಿಯ ಸದಸ್ಯರನ್ನು ನಾನೇ ಆಹ್ವಾನಿಸಿ ಮಾತನಾಡುತ್ತೇನೆ ಎಂಬುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
PublicNext
30/07/2022 05:32 pm