ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಮಾತು; ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ಅರೆಸ್ಟ್‌

ನವದೆಹಲಿ: ಪ್ರವಾದಿ ಮುಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತೆಲಂಗಾಣ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ನನ್ನು ಇಂದು ಬಂಧಿಸಲಾಗಿದೆ. ಸಿಂಗ್ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಹೈದರಾಬಾದ್‌ನಲ್ಲಿ ನಿನ್ನೆ ರಾತ್ರಿ ನಡೆದ ಭಾರೀ ಪ್ರತಿಭಟನೆ ನಂತರ ಎಫ್ ಐಆರ್ ದಾಖಲಿಸಿ ಬಂಧಿಸಲಾಗಿದೆ.

ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಿರುವುದಕ್ಕೆ U/s 295(a), 153(a) ಇತರೆ ಸೆಕ್ಷನ್‌ಗಳಡಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೈದರಾಬಾದ್‌ನ ದಕ್ಷಿಣ ವಲಯದ ಉಪ ಪೊಲೀಸ್ ಆಯುಕ್ತ ಪಿ. ಸಾಯಿ ಚೈತನ್ಯ ತಿಳಿಸಿದ್ದಾರೆ. ಅವಹೇಳನಕಾರಿ ಹೇಳಿಕೆಗಳ ವೀಡಿಯೊವನ್ನು ಸಿಂಗ್ ಬಿಡುಗಡೆ ಮಾಡಿದ ನಂತರ ಸೋಮವಾರ ರಾತ್ರಿ ನಗರ ಪೊಲೀಸ್ ಕಮಿಷನರ್ ಸಿವಿ ಆನಂದ್ ಅವರ ಕಚೇರಿ ಎದುರು ಮತ್ತು ಹೈದರಾಬಾದ್‌ನ ಇತರ ಭಾಗಗಳಲ್ಲಿ ಪ್ರತಿಭಟನೆ ನಡೆದಿದೆ.

ರಾಜಾ ಸಿಂಗ್, ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ ಹಾಗೂ ಆತನನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದ್ದರು.

Edited By : Abhishek Kamoji
PublicNext

PublicNext

23/08/2022 02:51 pm

Cinque Terre

38.61 K

Cinque Terre

7

ಸಂಬಂಧಿತ ಸುದ್ದಿ