ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅವಹೇಳನಕಾರಿ ಹೇಳಿಕೆಗೆ ಅರೆಸ್ಟ್‌ ಆದ ಬೆನ್ನಲ್ಲೆ, ಶಾಸಕ ರಾಜಾ ಸಿಂಗ್ ಬಿಜೆಪಿಯಿಂದ ಅಮಾನತು!

ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷ ತನ್ನ ಪಕ್ಷದ ಶಾಸಕ ಟಿ ರಾಜಾ ಸಿಂಗ್ ಅವರನ್ನು ಅಮಾನತುಗೊಳಿಸಿದೆ. ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ ಆರೋಪದ ಮೇಲೆ ಗೋಶಾಮಹಲ್ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರನ್ನು ಇಂದು ಪಕ್ಷದಿಂದ ಅಮಾನತುಗೊಳಿಸಿದೆ.

ಸಿಂಗ್ ಅವರ ಹೇಳಿಕೆಗಳ ವಿರುದ್ಧ ಮಂಗಳವಾರ ಮುಂಜಾನೆ ನಗರದಲ್ಲಿ ಬೃಹತ್ ಪ್ರತಿಭಟನೆಗಳು ನಡೆದಿದ್ದು, ಇದರ ಬೆನ್ನಲ್ಲೇ ಶಾಸಕನನ್ನು ಅವರನ್ನು ಬಂಧಿಸಲಾಗಿತ್ತು. ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನವ್ವರ್ ಫಾರೂಕಿಯನ್ನು ಟೀಕಿಸುವ ವಿಡಿಯೋ ಬಿಜೆಪಿ ಶಾಸಕ ಸೋಮವಾರ ಬಿಡುಗಡೆ ಮಾಡಿದ್ದರು. ಈ ವೀಡಿಯೊದಲ್ಲಿ, ಅವರು ನಿರ್ದಿಷ್ಟ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

Edited By : Abhishek Kamoji
PublicNext

PublicNext

23/08/2022 04:40 pm

Cinque Terre

32.72 K

Cinque Terre

3

ಸಂಬಂಧಿತ ಸುದ್ದಿ