ಈ ಹಿಂದೆ ಐಟಿ ಮತ್ತು ಇಡಿ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದರು.
ಈ ವೇಳೆ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಡಿಕೆ ಶಿವಕುಮಾರ್ ಜೈಲು ಸೇರಿದ್ದರು.
ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಈ ಪ್ರಕರಣದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು.
ಅಕ್ರಮ ಆಸ್ತಿ ಗಳಿಕೆ ಹಾಗೂ ಸಾರ್ವಜನಿಕ ಹಣದ ದುರುಪಯೋಗ ಈ ಎರಡು ಕಾರಣಗಳೇ ಸಿಬಿಐ ಅಧಿಕಾರಿಗಳು ದಾಳಿ ನಡೆಸಲು ಪ್ರಮುಖ ಕಾರಣವಾಗಿದೆ.
ಮೊದಲು ಜಾರಿ ನಿರ್ದೇಶನಾಲಯ(ಇಡಿ) ಹಾಗೂ ಐಟಿಯ ಎರಡು ದಾಖಲೆಗಳನ್ನು ಸಿಬಿಐ ಕೂಲಂಕುಷವಾಗಿ ಪರಿಶೀಲನೆ ನಡೆಸಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಪವರ್ ಮಿನಿಸ್ಟರ್ ಹುದ್ದೆಯಲ್ಲಿರುವಾಗ ಡಿಕೆ ಸಾರ್ವಜನಿಕ ಹಣವನ್ನು ದುರುಪಯೋಗ ಮಾಡಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಬಂದಿತ್ತು.
ಇಂಧನ ಇಲಾಖೆಯಲ್ಲಿರುವಾಗ ಒಟ್ಟು 60 ಕೋಟಿ ಅಕ್ರಮ ಹಣದ ವಹಿವಾಟಿನ ಬಗ್ಗೆ ಇಡಿ ಹಾಗೂ ಐಟಿ ಲೆಕ್ಕ ಹಾಕಿದೆ.
ವಿದ್ಯುತ್ ಇಲಾಖೆಯಲ್ಲಿ ಏಜೆನ್ಸಿ ಮೂಲಕ ಭಾರೀ ಅಕ್ರಮ ಹಣ ವಹಿವಾಟಿನ ಆರೋಪ ಇದ್ದು, ಇದಕ್ಕೆ ಪೂರಕ ಸಾಕ್ಷಿಯನ್ನು ಇಡಿ ಹಾಗೂ ಐಟಿ ಇಲಾಖೆ ಕಲೆ ಹಾಕಿವೆ.
ಅದರ ಆಧಾರದ ಮೇಲೆ ಇಂದು ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ.
PublicNext
05/10/2020 12:54 pm