ಬೆಂಗಳೂರು : ಇಂದು ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ವೇಳೆ ಬರೋಬ್ಬರಿ ಸುಮಾರು 50 ಲಕ್ಷ ರೂ. ಪತ್ತೆಯಾಗಿದೆ.
ಅಧಿಕಾರಿಗಳು ಆ ಹಣವನ್ನು ಸೀಜ್ ಮಾಡಲಾಗಿದೆ ಎನ್ನಲಾಗಿದೆ.
ಡಿಕೆ ಶಿವಕುಮಾರ್ ಅವರಿಗೆ ಸಂಬಂಧಿಸಿದ ಕರ್ನಾಟಕದ 9 ಕಡೆ, ದೆಹಲಿಯ 4 ಕಡೆ ಹಾಗೂ ಮುಂಬೈನ 1 ಕಡೆ ಇಂದು ಸಿಬಿಐ ದಾಳಿ ನಡೆದಿದ್ದು, ದಾಖಲೆಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಇದಾಗಲೇ 50 ಲಕ್ಷ ರೂಪಾಯಿ ಸೀಜ್ ಆಗಿರುವ ಹಿನ್ನೆಲೆಯಲ್ಲಿ ಹಣದ ಬಗ್ಗೆ ವಿಚಾರಣೆ ಮಾಡುವ ಸಲುವಾಗಿ ಸಿಬಿಐ ಅಧಿಕಾರಿಗಳು ಶಿವಕುಮಾರ್ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಡಿ.ಕೆ. ಶಿವಕುಮಾರ್ ಮನೆ ಜತೆಗೆ ಅವರ ಸಹೋದರ ಸಂಸದ ಡಿ.ಕೆ. ಸುರೇಶ್ ಮನೆ ಮೇಲೂ ದಾಳಿ ನಡೆಸಲಾಗಿದೆ. ಅವರಿಗೆ ಸಂಬಂಧಿಸಿದ ನಿವಾಸ, ಸಂಸ್ಥೆ, ಕಟ್ಟಡಗಳ ಮೇಲೆ ಸಿಬಿಐ ದಾಳಿ ಮಾಡಿದೆ.
ಡಿ.ಕೆ. ಶಿವಕುಮಾರ್ ಇಂಧನ ಸಚಿವರಾಗಿದ್ದ ವೇಳೆ ಸಾರ್ವಜನಿಕರ ಹಣವನ್ನು ದುರುಪಯೋಗ ಮಾಡಿಕೊಂಡು, ಬಹುಕೋಟಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
PublicNext
05/10/2020 12:37 pm