ಜಿಲ್ಲೆಯಲ್ಲಿ ಸಾವರ್ಕರ್ ಫೋಟೋ ಹರಿದವರನ್ನು ಕಂಡಲ್ಲಿ ಗುಂಡಿಕ್ಕಿ ಕೊಲ್ಲಬೇಕು ಎಂದು ತುಮಕೂರಿನಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಫೋಟೊ ಹರಿದವರಿಗೆ ಕಂಡಲ್ಲಿ ಗುಂಡು ಹೊಡೆಯಿರಿ, ತುಮಕೂರು ಹಾಗೂ ಶಿವಮೊಗ್ಗ, ಕೆಜೆ ಹಳ್ಳಿ, ಡಿಜೆಹಳ್ಳಿ ಆಗುವುದು ಬೇಡ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರೋಪಿಗಳನ್ನು ಬಂಧಿಸಿ ಎಂದು ಆಗ್ರಹಿಸಿದ್ದಾರೆ.
ಇನ್ನು ಸಾವರ್ಕರ್ ಫೋಟೋ ಹರಿದು ಹಾಕಿದವರು ಪಾಪಿಗಳು, ಕಿಡಿಗೇಡಿಗಳನ್ನು ಗಡಿಪಾರು ಮಾಡಬೇಕು. ಹೆಚ್ಚು ಕಡಿಮೆ ಆದರೆ, ಕಂಡಲ್ಲಿ ಗುಂಡಿಟ್ಟು ಹೊಡೆಯಿರಿ. ಇನ್ನು ಪಾಲಿಕೆಯವರು ಫ್ಲೆಕ್ಸ್ ತೆಗೆದು ಹಾಕಿರುವುದು ತಪ್ಪು, ಯಾಕೆ ತೆಗೆಯಬೇಕು. ಆಯುಕ್ತರನ್ನು ಸಸ್ಪೆಂಡ್ ಮಾಡಲಿ ಎಂದು ಆಕ್ರೋಶ ಭರಿತ ಹೇಳಿಕೆಗಳನ್ನು ನೀಡಿದ್ದಾರೆ.
PublicNext
16/08/2022 03:16 pm