ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಮತ್ತು ಲೋಕೋಪಯೋಗಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅನಿಲ್ ಕುಮಾರ್ ಅವರು 2023 ರ ವಿಧಾನಸಭಾ ಚುನಾವಣೆಯಲ್ಲಿ, ಕೊರಟಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಇದೀಗ ಎಎಪಿ ಜಿಲ್ಲಾಧ್ಯಕ್ಷ ಡಾ.ಬಿ.ಎಲ್.ವಿಶ್ವನಾಥ್ ಇವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಲವು ಪಕ್ಷಗಳಿಂದ ಎಎಪಿ ಪಕ್ಷಕ್ಕೆ ಕಾರ್ಯಕರ್ತರನ್ನು ಸೇರ್ಪಡೆ ಮಾಡಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ವಿಶ್ವನಾಥ್, ನಿವೃತ್ತ ಐಎಎಸ್ ಅಧಿಕಾರಿ ಬಿ.ಹೆಚ್ ಅನಿಲ್ ಕುಮಾರ್ ಸೇವೆಯಲ್ಲಿದ್ದಾಗಲೇ ಮುಂಬರುವ ವಿಧಾನ ಸಭಾ ಚುನಾವಣೆಗೆ ಕೊರಟಗೆರೆ ಮೀಸಲು ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ಬಹುತೇಕ ಮಾಧ್ಯಮಗಳು ವರದಿ ಮಾಡಿದ್ದವು.
ಇದಕ್ಕೆ ಪೂರಕವೆಂಬಂತೆ ಅನಿಲ್ ಕುಮಾರ್ ತಮ್ಮ ಅಧಿಕಾರ ಅವಧಿಯ ಕಡೆಯ 6 ತಿಂಗಳುಗಳಿಂದ ಕೊರಟಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಾಜಕೀಯ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಈ ಮೂಲಕ ಎಐಎಸ್ಆರರ್ 1968ರ ನಿಯಮವನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಎಎಪಿ ಪಕ್ಷ ಇವರ ವಿರುದ್ಧ ಅಗತ್ಯ ದಾಖಲೆಗಳೊಂದಿಗೆ ಇಲಾಖೆಗೆ ಮತ್ತು ಚುನಾವಣಾ ಆಯೋಗಕ್ಕೆ ದೂರು ನೀಡಿರುವುದಾಗಿ ಹೇಳಿದ್ದಾರೆ.
ವರದಿ: ರಾಘವೇಂದ್ರ ದಾಸರಹಳ್ಳಿ, ಪಬ್ಲಿಕ್ ನೆಕ್ಸ್ಟ್
PublicNext
09/08/2022 08:12 pm