ಬೆಂಗಳೂರು: ಧಾರ್ಮಿಕ ಕಟ್ಟಡಗಳ ಸಂರಕ್ಷಣಾ ಮಸೂದೆ ಈಗಾಗಲೇ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಈಗ ವಿಧಾನ ಪರಿಷತ್‌ನಲ್ಲೂ ಮಸೂದೆ ಧ್ವನಿಮತದ ಮೂಲಕ ಅಂಗೀಕಾರವಾಗಿದ್ದು ಇನ್ಮುಂದೆ ರಾಜ್ಯದಲ್ಲಿ ಯಾವುದೇ ಧಾರ್ಮಿಕ ಕಟ್ಟಡ ತೆರವು ಕಾರ್ಯಾಚರಣೆಗೆ ಬ್ರೇಕ್ ಬಿದ್ದಿದೆ.
ಶುಕ್ರವಾರ ವಿಧಾನಪರಿಷತ್ ಕಲಾಪ ಆರಂಭಗೊಳ್ಳುತ್ತಿದ್ದಂತೆ ಕಾನೂನು ಸಚಿವ ಜೆಸಿ ಮಾಧುಸ್ವಾಮಿಯವರು ಕರ್ನಾಟಕ ಧಾರ್ಮಿಕ ಕಟ್ಟಡಗಳ ಸಂರಕ್ಷಣೆ ವಿಧೇಯಕವನ್ನು ಮಂಡಿಸಿ ಮಾತನಾಡಿದಂತ ಅವರು, ಸಾರ್ವಜನಿಕ ಸ್ಥಳದಲ್ಲಿರುವ ಧಾರ್ಮಿಕ ಕಟ್ಟಡಗಳ ತೆರವು ಪ್ರಕರಣ ಸುಪ್ರೀಂ ಕೋರ್ಟ್ ಮುಂದಿದೆ. ನಾವು ಯಾವುದೇ ಧರ್ಮದ ಧಾರ್ಮಿಕ ಕಟ್ಟಡವನ್ನು ಸಕ್ರಮ ಮಾಡೋ ಉದ್ದೇಶದಿಂದ ಈ ವಿಧೇಯಕವನ್ನು ತರುತ್ತಿಲ್ಲ ಎಂದರು.
ಸಾರ್ವಜನಿಕ ಸ್ಥಳದಲ್ಲಿರುವ ಧಾರ್ಮಿಕ ಕಟ್ಟಡಗಳ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳೋವರೆಗೂ ಸಾರ್ವಜನಿಕ ಸ್ಥಳದಲ್ಲಿ ಇರುವ ಧಾರ್ಮಿಕ ಕಟ್ಟಡಗಳಿಗೆ ರಕ್ಷಣೆ ಕೊಡಬೇಕು ಎಂದು ವಿಧೇಯಕವನ್ನು ತರಲಾಗುತ್ತಿದೆ ಎಂದರು. ಈ ಬಳಿಕ ಚರ್ಚೆಯ ನಂತ್ರ ವಿಧಾನ ಪರಿಷತ್‌ನಲ್ಲಿಯೂ ಕರ್ನಾಟಕ ಧಾರ್ಮಿಕ ಕಟ್ಟಗಳ ಸಂರಕ್ಷಣೆ ವಿಧೇಯಕಕ್ಕೆ ಧ್ವನಿಮತದ ಮೂಲಕ ಅಂಗೀಕಾರವನ್ನು ನೀಡಲಾಯಿತು.
PublicNext
25/09/2021 07:27 am