ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶ್ರೀರಾಮ ಸೇನೆಯಿಂದ ದೇವಸ್ಥಾನಗಳಲ್ಲಿ ಭಜನೆ, ಸುಪ್ರಭಾತ ಶುರು: ಮಸೀದಿಯ ಮೈಕ್‌ಗಳ ತೆರವಿಗೆ ಆಗ್ರಹ

ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ನೀಡಿದ್ದ ಗಡುವು ಅಂತ್ಯವಾಗಿದ್ದು, ಶ್ರೀರಾಮಸೇನೆ ಇಂದು ಮುಂಜಾನೆಯಿಂದ ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸಾ, ಭಜನೆ ಮತ್ತು ಸುಪ್ರಭಾತ ಹಾಕಲಾಗಿದೆ.

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಮೈಸೂರಿನ ಶಿವರಾಂಪೇಟೆ ಆಂಜನೇಯ ಸ್ವಾಮಿ ದೇಗುಲದಲ್ಲಿ ಆಜಾನ್ ಪರ್ಯಾಯವಾಗಿ ಹನುಮಾನ್ ಚಾಲೀಸಾ ಪಠಣೆ, ಸುಪ್ರಭಾತ ಆರಂಭಕ್ಕೂ ಮುನ್ನ ವಿಶೇಷ ಪೂಜೆ ಮಾಡಲಾಗಿದೆ. ಮುತಾಲಿಕ್ ಗೆ ಕೆ.ಕೃಷ್ಣಮೋಹನಾನಂದಗಿರಿ ಗೋ ಸ್ವಾಮೀಜಿ ಸಾಥ್ ನೀಡಿದ್ದಾರೆ. ಜೈ ಶ್ರೀರಾಮ ಘೋಷಣೆಯೊಂದಿಗೆ ಹುನುಮಾನ್ ಚಾಲೀಸಾ ಪಠಣೆ ಮಾಡಲಾಗಿದೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕರುಣೇಶ್ವರ ಮಠದಲ್ಲಿ ಧ್ವನಿವರ್ಧಕದ ಮೂಲಕ ಸುಪ್ರಭಾತ ಹಾಕಲಾಗಿದೆ. ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗಶ್ರೀ ನೇತೃತ್ವದಲ್ಲಿ ಸುಪ್ರಭಾತ ಹಾಕಲಾಗಿದೆ. ಮುಂಜಾನೆ 5 ಗಂಟೆಯಿಂದ ಭಕ್ತಿಗೀತೆ ಹಾಕಲಾಗಿದೆ.

ಬೆಂಗಳೂರಿನ ನೀಲಸಂದ್ರ ಜಯ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಶ್ರೀರಾಮಸೇನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹನುಮಾನ್ ಚಾಲೀಸಾ ಪಠಣಕ್ಕೆ ತೆರಳುತ್ತಿದ್ದ ವೇಳೆ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ. ಬಳಿಕ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಹುಬ್ಬಳ್ಳಿಯಲ್ಲೂ ಅಭಿಯಾನ ಆರಂಭವಾಗಿದೆ. ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆಯ ಐದಾರು ಕಾರ್ಯಕರ್ತರು ಸೇರಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಭಜನೆ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

09/05/2022 07:25 am

Cinque Terre

76.56 K

Cinque Terre

21