ಲಕ್ನೋ: ಪ್ರವಾದಿ ಮೊಹಮ್ಮದ್ ಕುರಿತು ಬಿಜೆಪಿಯ ಇಬ್ಬರು ಮಾಜಿ ನಾಯಕರು ನೀಡಿದ ಹೇಳಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಜನರು ಪಶ್ಚಿಮ ಬಂಗಾಳದ ಹೌರಾದಲ್ಲಿರುವ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದ್ದಾರೆ.
ಬಿಜೆಪಿ ನಾಯಕ ಅನಿರ್ಬನ್ ಗಂಗೂಲಿ ಅವರು ಬೆಂಕಿ ಹೊತ್ತಿ ಧ್ವಂಸಗೊಂಡ ಕಚೇರಿಯ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಗಲಭೆಕೋರರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಜೂನ್ 13 (ಸೋಮವಾರ) ಬೆಳಿಗ್ಗೆ 6 ಗಂಟೆಯವರೆಗೆ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
PublicNext
11/06/2022 07:21 am