ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟ್ಟುನಿಟ್ಟಾಗಿ ಗೋಹತ್ಯೆ ನಿಷೇಧ ಜಾರಿಗೊಳಿಸಿ: ಡಿಸಿಗಳಿಗೆ ಬಿಎಸ್‌ವೈ ಸೂಚನೆ

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ-2020 ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ‌ಸಿಎಂ ಯಡಿಯೂರಪ್ಪ ಅವರು ಬುಧವಾರ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಸಿಎಂ 'ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿ ವಿಳಂಬ ಮಾಡಬಾರದು. ಅದಕ್ಕೆ ಪೂರಕವಾಗಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು' ಎಂದು ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದ ಜನರಿಗೆ ಬಲ‌ ತುಂಬಲು ಉದ್ಯೋಗ ಖಾತ್ರಿ ಯೋಜನೆಯ‌ ಅನುಷ್ಠಾನವನ್ನು ಚುರುಕುಗೊಳಿಸಬೇಕು. ಬೇಸಿಗೆ ಸಮೀಪಿಸುತ್ತಿದ್ದು, ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಎಚ್ಚರಿಕೆ‌ ವಹಿಸಬೇಕು. ಶಾಲೆಗಳು ಮುಚ್ಚಿದ್ದ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ಬಾಲ್ಯ ವಿವಾಹಗಳು ನಡೆದಿವೆ ಎಂಬ ಮಾಹಿತಿ ಇದೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ‌ಬಾಲ್ಯ ವಿವಾಹ ನಡೆಯದಂತೆ ನಿಯಂತ್ರಣ ಮಾಡಬೇಕು ಎಂದು ನಿರ್ದೇಶನ ನೀಡಿದರು.

Edited By : Vijay Kumar
PublicNext

PublicNext

20/01/2021 02:08 pm

Cinque Terre

49.86 K

Cinque Terre

4

ಸಂಬಂಧಿತ ಸುದ್ದಿ