ಬೆಂಗಳೂರು: ಗಣರಾಜ್ಯೋತ್ಸವ ಸಮಾರಂಭ ನಡೆದ ನಂತರ ಬೆಂಗಳೂರಿನಲ್ಲಿ ರೈತರ ಟ್ರ್ಯಾಕ್ಟರ್ ಪರೇಡ್ ಹಿನ್ನೆಲೆಯಲ್ಲಿ ಸಿಎಂ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಯುತ್ತಿದೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಗುಪ್ತದಳ ಎಡಿಜಿಪಿ ದಯಾನಂದ್ ಭಾಗಿಯಾಗಿದ್ದಾರೆ.
ನಾಳೆ ಬೃಹತ್ ಪ್ರಮಾಣದಲ್ಲಿ ನಡೆಯಲಿರುವ ರೈತರ ಟ್ರ್ಯಾಕ್ಟರ್ ಪರೇಡ್ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸುತ್ತಿದ್ದು, ನಾಳೆ ಪರೇಡ್ಗೆ ಅನುಮತಿ ವಿಚಾರ ಹಾಗೂ ಅನುಮತಿ ನೀಡಿದರೆ ಯಾವ ರಸ್ತೆಗಳಲ್ಲಿ ಅವಕಾಶ ನೀಡಬೇಕು ಮತ್ತು ಭದ್ರತೆ ಒದಗಿಸಬೇಕು ಎನ್ನುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.
PublicNext
25/01/2021 05:22 pm