ಬೆಂಗಳೂರು: ಬೆಂಗಳೂರು ನಗರದಲ್ಲಿ ಆ್ಯಂಬುಲೆನ್ಸ್‌ಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಆ್ಯಂಬುಲೆನ್ಸ್ ನಿರ್ವಹಣಾ ವ್ಯವಸ್ಥೆ ಜಾರಿಗೊಳಿಸಲು ಕರೆಯಲಾಗಿದ್ದ 1,800 ಕೋಟಿ ರೂ. ಮೊತ್ತದ ಟೆಂಡರ್ ರದ್ದು ವಿಚಾರ ಸಂಬಂಧ ಹೈಕೋರ್ಟ್ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ಗೆ ನೋಟಿಸ್ ಜಾರಿ ಮಾಡಿದೆ.
ಭಾರತ್ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಪಿಐಎಲ್ ಕುರಿತು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ನೇತೃತ್ವದ ವಿಭಾಗೀಯಪೀಠ ಗುರುವಾರ ವಿಚಾರಣೆ ನಡೆಸಿತು. ಸರಕಾರಿ ವಕೀಲರು, ಆಡಳಿತಾತ್ಮಕ ವಿಷಯದಲ್ಲಿಮುಖ್ಯ ಕಾರ್ಯದರ್ಶಿ ಸರಕಾರವನ್ನು ಪ್ರತಿನಿಧಿಸಲಿದ್ದು, ಈಗಾಗಲೇ ಮುಖ್ಯ ಕಾರ್ಯದರ್ಶಿಯವರು ಪ್ರತಿವಾದಿಗಳಾಗಿದ್ದು, ಅವರಿಗೆ ನೋಟಿಸ್ ಜಾರಿಯಾಗಿದೆ ಎಂದರು.
PublicNext
26/02/2021 08:04 pm