ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಬಣದ ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರಿಗೆ ಸಿ.ಡಿ ಸಂಕಟ ಶುರುವಾಗಿದೆ. ಬಿ.ಎಸ್. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದ ರೇಣುಕಾಚಾರ್ಯ ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಸಿ.ಡಿ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.
ಸದ್ಯ ಬೆಂಗಳೂರಿನ ಸಿವಿಲ್ ನ್ಯಾಯಾಲಯವು ಸಿ.ಡಿ ಪ್ರಸಾರ ಮಾಡದಂತೆ ತಡೆಯಾಜ್ಞೆ ನೀಡಿದೆ. ಆದರೂ ಶಾಸಕ ರೇಣುಕಾಚಾರ್ಯಗೆ ಸಿ.ಡಿ ಅಳುಕು ಕಾಡುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ.
ಕಳೆದ ಮಾರ್ಚ್ ತಿಂಗಳಲ್ಲಿ ಆಗ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರ ಸಿ.ಡಿ ಬಹಿರಂಗವಾಗಿ ನಂತರ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಅದಾದ ನಂತರ ಹಲವು ಶಾಸಕರು ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರು ಕೂಡ ನ್ಯಾಯಾಲಯದಿಂದ ಇದೇ ರೀತಿ ತಡೆಯಾಜ್ಞೆ ತಂದಿದ್ದರು.
PublicNext
30/07/2021 08:26 pm