ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಜಿ ಸಚಿವ ವರ್ತೂರು ಪ್ರಕಾಶ್ ವಿರುದ್ಧ ಎಫ್​ಐಆರ್​ ದಾಖಲು

ಕೋಲಾರ: ಕೋವಿಡ್-19 ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಡಿ ಮಾಜಿ ಸಚಿವ ವರ್ತೂರ್ ಪ್ರಕಾಶ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ವರ್ತೂರ್ ಪ್ರಕಾಶ್ ಅವರು ಕೆಲವು ದಿನಗಳ ಹಿಂದೆ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಸಂಬಂಧ ಕಾರ್ಯಕರ್ತರ ಸಭೆಯನ್ನು ನಡೆಸಿದ್ದರು. ಕೋಲಾರ ನಗರದ ಕಲ್ಯಾಣ ಮಂಟಪ ಒಂದರಲ್ಲಿ ನಡೆದ ಸಭೆಯಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು. ಈ ವೇಳೆ ಮಾಜಿ ಸಚಿವರು ಬಿರಿಯಾನಿ ಊಟ ಹಾಕಿಸಿದ್ದರು.

ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದೇ ಭಾಗಿಯಾಗಿದ್ದರು. ಇದರಿಂದ ಕೊರೊನಾ ನಿಯಮ ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿತ್ತು. ಈ ಕಾರ್ಯಕ್ರಮದಲ್ಲಿ ವರ್ತೂರು ಪ್ರಕಾಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.

Edited By : Vijay Kumar
PublicNext

PublicNext

02/08/2021 10:53 pm

Cinque Terre

42.85 K

Cinque Terre

0

ಸಂಬಂಧಿತ ಸುದ್ದಿ