ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೃಹ ಇಲಾಖೆಯಲ್ಲಿ ಏನಾದರೊಂದು ಹೊಸದು ಮಾಡ್ತೀನಿ: ಅರಗ ಜ್ಞಾನೇಂದ್ರ

ತುಮಕೂರು: ನನಗೆ ಗೃಹ ಇಲಾಖೆ ಜವಾಬ್ದಾರಿ ನೀಡಲಾಗಿದೆ. ಈ ಇಲಾಖೆಯಲ್ಲಿ ಇಷ್ಟು ವರ್ಷ ಆಗದಿರುವ ಏನಾದರೊಂದು ಅಮೂಲಾಗ್ರ ಬದಲಾವಣೆ ಮಾಡ್ತೀನಿ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆ ಜವಾಬ್ದಾರಿ ನನಗೆ ಹೊಸದು. ಸೋಮವಾರ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತೇನೆ. ಆ ಮೂಲಕ ಅಧಿಕೃತವಾಗಿ ಚಾರ್ಜ್ ಸ್ವೀಕರಿಸಲಿದ್ದೇನೆ ಎಂದಿದ್ದಾರೆ.

ಪೊಲೀಸ್ ಇಲಾಖೆ ಸಶಕ್ತವಾಗಿ ಕೆಲಸ ಮಾಡುವ ಹಾಗೆ ಶಕ್ತಿ ತುಂಬಬೇಕೆಂದು ಯೋಚನೆ ಮಾಡಿದ್ದು, ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಇಲಾಖೆಯಲ್ಲಿ ಇಷ್ಟು ವರ್ಷ ತರಲಾಗದೇ ಇದ್ದ ಏನಾದರೊಂದು ಬದಲಾವಣೆ ತರಲು ಪ್ರಯತ್ನ ಮಾಡುತ್ತೇನೆ. ಜೊತೆಗೆ ಔರಾದ್ಕರ್ ವರದಿ ಅಧ್ಯಯನ ಮಾಡಿ ಪೊಲೀಸರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲು ಪ್ರಯತ್ನ ಪಡುತ್ತೆನೆ ಎಂದು ಭರವಸೆ ನೀಡಿದರು.

Edited By : Nagaraj Tulugeri
PublicNext

PublicNext

09/08/2021 08:14 am

Cinque Terre

32.07 K

Cinque Terre

5

ಸಂಬಂಧಿತ ಸುದ್ದಿ