ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೆಗಾಸಸ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಮಾಡಬೇಡಿ: ಸುಪ್ರೀಂ ಕೋರ್ಟ್

ನವದೆಹಲಿ: ಪೆಗಾಸಸ್ ವಿವಾದದ ಬಗ್ಗೆ ಸದ್ಯ ಇಡೀ ದೇಶದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆ ವಿಪಕ್ಷಗಳು ಸಂಸತ್ತಿನಲ್ಲಿ ತಮ್ಮ ಧ್ವನಿ ಮೊಳಗಿಸಿವೆ. ಆದ್ರೆ ಈ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶವೊಂದನ್ನು ನೀಡಿದೆ. ನ್ಯಾಯಾಂಗದ ಚೌಕಟ್ಟಿನಲ್ಲಿ ಈ ವಿವಾದ ವಿಚಾರಣೆಯಾಗುತ್ತಿದೆ. ವಿಚಾರಣೆಗಾಗಿ ಅರ್ಜಿ ಸಲ್ಲಿಸಿದ ಅರ್ಜಿದಾರರು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತ್ಯೇಕ ಚರ್ಚೆ ಮಾಡಬಾರದು ಸುಪ್ರೀಂ ಕೋರ್ಟ್ ಹೇಳಿದೆ.

ಪೆಗಾಸಸ್ ಬೇಹುಗಾರಿಕೆಯ ಹಗರಣ ಕುರಿತು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಮಂಗಳವಾರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು.

ಈ ಹಿಂದೆ ಪೆಗಾಸಸ್ ವಿವಾದ ಹಿರಿಯ ವಕೀಲ ಕಪಿಲ್ ಸಿಬಲ್, ಹಿರಿಯ ಪತ್ರಕರ್ತ ಎನ್.ರಾಮ್ ಹಾಗೂ ಶಶಿಕುಮಾರ್ ಅವರು ಅರ್ಜಿ ಸಲ್ಲಿಸಿದ್ದು. ಈ ಅರ್ಜಿಯನ್ನು ನ್ಯಾಯಾಲಯದ ವಿಚಾರಣೆ ನಡೆಸಿದ ಬಳಿಕ ಪತ್ರಕರ್ತ ರಾಮ್ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಲಾಗಿತ್ತು.

Edited By : Nagaraj Tulugeri
PublicNext

PublicNext

10/08/2021 04:45 pm

Cinque Terre

63.85 K

Cinque Terre

11

ಸಂಬಂಧಿತ ಸುದ್ದಿ