ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೊಮ್ಮಾಯಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ಸಭೆ

ಬೆಂಗಳೂರು :ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ಜನರು ಶಾಂತಿ ನೆಮ್ಮದಿಯ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಸಭೆಯಲ್ಲಿ ಚರ್ಚೆಯಾದ ಮಹತ್ವದ ವಿಚಾರಗಳು

ಪೊಲೀಸ್ ಇಲಾಖೆಯಲ್ಲಿ ಹಲವು ಸುಧಾರಣೆಗಳು, ಮೂಲಸೌಕರ್ಯ ಅಭಿವೃದ್ಧಿಗೆ ಚಾಲನೆ ನೀಡಲಾಗಿತ್ತು. ಮುಂದಿನ ದಿನಗಳಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗಿದೆ.

ಕೋವಿಡ್ 19 ಸಂಭಾವ್ಯ ಮೂರನೇ ಅಲೆ ತಡೆಗಟ್ಟಲು ಕ್ರಮ ವಹಿಸಬೇಕು. ಗಡಿ ಜಿಲ್ಲೆಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು. ಹಿರಿಯ ಅಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಗಡಿ ಚೆಕ್ ಪೋಸ್ಟ್ ಗಳ ತಪಾಸಣೆ ನಡೆಸಬೇಕು.

ಅಪರಾಧ ಪ್ರಕರಣಗಳನ್ನು ಹತೋಟಿಗೆ ತರಬೇಕು. ಅಪರಾಧ ವೈರಸ್ ಇದ್ದ ಹಾಗೆ. ಇದನ್ನು ಸಶಕ್ತವಾಗಿ ಸದೆಬಡಿಯಬೇಕು. ಆಗ ಹತೋಟಿಯಲ್ಲಿರುತ್ತದೆ.

ಸಮಾಜದಲ್ಲಿ ಜೂಜು, ಡಾರ್ಕ್ ವೆಬ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚಿಸಿದರು.

ಅಪರಾಧವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕಾನೂನು, ಸುವ್ಯವಸ್ಥೆ ಕಾಪಾಸುವುದು ಸರ್ಕಾರದ ಪ್ರಥಮ ಆದ್ಯತೆ.

ಭೂವಿವಾದದ ಹಿನ್ನೆಲೆಯಲ್ಲಿ ಸಂಭವಿಸುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು.

ಮಾದಕ ವಸ್ತುಗಳ ವಿರುದ್ಧದ ಹೋರಾಟ ಮುಂದುವರೆಯಲಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು.

ಆಂತರಿಕ ಭದ್ರತಾ ವಿಭಾಗವನ್ನು ಬಲಪಡಿಸಬೇಕು.

ಕೈದಿಗಳ ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು.

ಪೊಲೀಸ್ ವ್ಯವಸ್ಥೆ ಜನಸ್ನೇಹಿ ಯಾಗಬೇಕು.

Edited By : Nagaraj Tulugeri
PublicNext

PublicNext

10/08/2021 08:15 pm

Cinque Terre

61.96 K

Cinque Terre

2

ಸಂಬಂಧಿತ ಸುದ್ದಿ