ಧಾರವಾಡ: ಕಳೆದ 9 ತಿಂಗಳಿನಿಂದ ಸೆರೆವಾಸ ಅನುಭವಿಸಿದ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೊನೆಗೂ ಸೆರೆವಾಸದಿಂದ ಮುಕ್ತಿ ಸಿಕ್ಕಿದೆ.
ಮೊನ್ನೆಯಷ್ಟೇ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ವಿನಯ್ ಕುಲಕರ್ಣಿಗೆ ಇಂದು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೂಡ ಸಾಕ್ಷ್ಯನಾಶ ಪ್ರಕರಣದಲ್ಲೂ ಜಾಮೀನು ಮಂಜೂರು ಮಾಡಿದೆ.
ಆ ಮೂಲಕ ವಿನಯ್ ಅವರ ಸೆರೆವಾಸ ಅಂತ್ಯವಾದಂತಾಗಿದ್ದು, ಅವರ ಅಭಿಮಾನಿಗಳಲ್ಲಿ ಹರ್ಷವನ್ನುಂಟು ಮಾಡಿದೆ.
ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ವಿನಯ್ ಅವರು ನ.5 ರಂದು ಬಂಧಿತರಾಗಿದ್ದರು. ಸದ್ಯ ವಿನಯ್ ಅವರು, ಜೈಲಿನಿಂದ ಬಿಡುಗಡೆಯಾಗುತ್ತಿದ್ದು, ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ರಂಗು ಪಡೆದುಕೊಳ್ಳಲಿದೆ. ಅಲ್ಲದೇ ರಾಜಕೀಯ ಚಟುವಟಿಕೆಗಳು ಗರಿಗೆದರಲಿವೆ.
PublicNext
19/08/2021 03:50 pm