ಬೆಳಗಾವಿ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಬೆಳಗಾವಿಯ ಹಿಂಡಲಗ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಇನ್ನು ಕೆಲವೇ ಹೊತ್ತಿನಲ್ಲಿ ಬಿಡುಗಡೆಯಾಗುತ್ತಿದ್ದಾರೆ.
ಸದ್ಯ ಜಾಮೀನಿನ ಮೇಲೆ ಹೊರಬರುತ್ತಿರುವ ನಾಯಕನ ಸ್ವಾಗತಕ್ಕೆ ಸಾಕಷ್ಟು ಜನ ಅಭಿಮಾನಿಗಳು ಜೈಲು ಮುಂದಾಗಕ್ಕೆ ಆಗಮಿಸುತ್ತಿದ್ದಾರೆ. ವಿನಯ್ ಕುಲಕರ್ಣಿ ಎರಡು ದಿನಗಳ ಹಿಂದೆಯೇ ಬಿಡುಗಡೆಯಾಗಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಜೈಲಾಧಿಕಾರಿಗಳಿಗೆ ಬೇಲ್ ಪ್ರತಿ ಲಭ್ಯವಾಗಿರಲಿಲ್ಲ. ಇದೀಗ ಬೇಲ್ ಪ್ರತಿ ಲಭ್ಯವಾಗಿದ್ದು, ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಜೈಲಿನ ಬಳಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
PublicNext
21/08/2021 11:06 am