ಬೆಳಗಾವಿ : ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಇಂದು ಜಾಮೀನಿನ ಮೇಲೆ ಹಿಂಡಲಗಾ ಜೈಲಿನಿಂದ ಹೊರಬಂದಿದ್ದಾರೆ. ಈ ವೇಳೆ ನಾಯಕನ ಸ್ವಾಗತಕ್ಕೆ ಸೇರಿದ್ದ ಸಾವಿರಾರು ಜನ ಕೋವಿಡ್ ರೂಲ್ಸ್ ಮರೆತ್ತಿದ್ದಾರೆ ಹೀಗಾಗಿ ವಿನಯ ಕುಲಕರ್ಣಿ ಸೇರಿದಂತೆ ಕಾರ್ಯಕರ್ತರು, ಅಭಿಮಾನಿಗಳ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ.
ಗಡಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಇದ್ದರೂ ಜೈಲಿನಿಂದ ಹೊರಬಂದ ವಿನಯ ರೋಡ್ ಶೋ ನಡೆಸಿದ್ದಾರೆ. ಮೆರವಣಿಗೆ ವೇಳೆ ಕೊವಿಡ್ ನಿಯಮ ಉಲ್ಲಂಘನೆಯಾಗಿದ್ದು, ದೈಹಿಕ ಅಂತರವಿಲ್ಲದೆ, ಮಾಸ್ಕ್ ಧರಿಸದೆ ಜನರು ನಿರ್ಲಕ್ಷ್ಯ ತೋರಿದ್ದಾರೆ. ವಿನಯ್ ಕುಲಕರ್ಣಿ ಜೈಲಿನಿಂದ ಹೊರ ಬರುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರು ಮಾಜಿ ಸಚಿವರಿಗೆ ಹಾರ ಹಾಕಿ ತಿಲಕವಿಟ್ಟು ಅದ್ದೂರಿಯಾಗಿ ಸ್ವಾಗತಿಸಿದರು.
PublicNext
21/08/2021 01:31 pm