ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇಂದ್ರ ಸಚಿವ ರಾಣೆಗೆ ತಡರಾತ್ರಿ ಸಿಕ್ತು ಜಾಮೀನು

ಮುಂಬೈ: 'ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕೆನ್ನೆಗೆ ಬಾರಿಸುತ್ತೇನೆ' ಎಂದು ಹೇಳಿದ್ದಕ್ಕೆ ಬಂಧಿಸಲಾಗಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರಿಗೆ ಮಂಗಳವಾರ ತಡರಾತ್ರಿ ಜಾಮೀನು ನೀಡಲಾಗಿದೆ.

ಬಂಧನ ಬಳಿಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ರಾಣೆ ಅವರನ್ನು ಹಾಜರು ಪಡಿಸಿದ ಪೊಲೀಸರು ಏಳು ದಿನ ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು. ರಾಣೆ ಪರ ವಕೀಲರು ಇದಕ್ಕೆ ವಿರೋಧ ವ್ಯಕ್ತಪಡಿಸಿದರು. 'ರಾಣೆ ಅವರ ಆರೋಗ್ಯ ಸರಿ ಇಲ್ಲ. ಹೀಗಾಗಿ ಅವರಿಗೆ ಜಾಮೀನು ನೀಡಬೇಕು' ಎಂದು ಮನವಿ ಮಾಡಿದರು. ಇದಕ್ಕೆ ಸಮ್ಮತಿಸಿದ ನ್ಯಾಯಾಧೀಶರು ಷರತ್ತಿನ ಮೇಲೆ ಜಾಮೀನು ಮಂಜೂರು ಮಾಡಿದರು. ಧ್ವನಿ ಪರೀಕ್ಷೆಗೆ ಮತ್ತು ವಿಚಾರಣೆಗೆ ಸಹಕರಿಸಬೇಕು ಎಂದು ನ್ಯಾಯಾಲಯ ರಾಣೆ ಅವರಿಗೆ ಸೂಚಿಸಿತು.

ರಾಜ್ಯದ ರತ್ನಗಿರಿ ಜಿಲ್ಲೆಯಲ್ಲಿ ಬಿಜೆಪಿಯ ಜನಾಶೀರ್ವಾದ ಯಾತ್ರೆ ನಡೆಸುತ್ತಿದ್ದ ರಾಣೆ ಅವರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ನಂತರ ಸಂಗಮೇಶ್ವರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. 20 ವರ್ಷದಲ್ಲಿ ಕೇಂದ್ರ ಸಚಿವರೊಬ್ಬರನ್ನು ಬಂಧಿಸಿದ್ದು ಇದೇ ಮೊದಲು.

Edited By : Vijay Kumar
PublicNext

PublicNext

25/08/2021 08:13 am

Cinque Terre

58.91 K

Cinque Terre

1

ಸಂಬಂಧಿತ ಸುದ್ದಿ