ಬೆಂಗಳೂರು: ರೈತ ಸಂಘಟನೆಗಳು ಹಾಗೂ ಎಡಪಕ್ಷಗಳು ಕರೆ ನೀಡಿರುವ ಭಾರತ್ ಬಂದ್‌ಗೆ ರಾಜ್ಯದ ಬಹುತೇಕ ಕಡೆಗಳಲ್ಲಿ ನೀರಸ ಪ್ರತಿಕ್ರಿಯೆ ಕಂಡು ಬಂದಿದೆ. ರಾಜಧಾನಿ ಬೆಂಗಳೂರಿನ ಎಲ್ಲೆಡೆ ಸಾರ್ವಜನಿಕ ಚಟುವಟಿಕೆಗಳು ಎಂದಿನಂತೆ ನಡೆಯುತ್ತಿವೆ. ಉಳಿದಂತೆ ಬೇರೆ ಜಿಲ್ಲೆಗಳಲ್ಲಿ ಪ್ರತಿಭಟನೆ ಆರಂಭವಾಗಿದ್ದರೂ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ದಿನಸಿ ಸಾಮಗ್ರಿಗಳ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಆದರೆ ರೈತರ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ ಎಂದು ಆಕ್ರೋಶಿತರಾದ ರೈತರು ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಹೇಳಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡ, ರಾಯಚೂರು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ ಜಿಲ್ಲೆಗಳಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದೆ. ಈ ನಡುವೆ ಸರ್ಕಾರಿ ಬಸ್‌ಗಳ ಓಡಾಟ ಎಂದಿನಂತೆ ಇದೆ. ಕೆಲವೆಡೆ ಪ್ರತಿಭಟನಾಕಾರರು ಸಾರಿಗೆ ಸಿಬ್ಬಂದಿಗೆ ಮನವಿ ಮಾಡಿಕೊಂಡು ಬಸ್ ಸಂಚಾರ ಬಂದ್ ಮಾಡಿಸುತ್ತಿದ್ದಾರೆ.
PublicNext
27/09/2021 09:11 am