ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇಂದ್ರದ ವಿರುದ್ಧ ದಾವಣಗೆರೆಯಲ್ಲಿ ಹೋರಾಟ: 20ಕ್ಕೂ ಹೆಚ್ಚು ರೈತರ ಬಂಧನ

ದಾವಣಗೆರೆ: ಕೇಂದ್ರ ಸರ್ಕಾರದ ಕೃಷಿ ವಿರೋಧಿ ನೀತಿ ವಿರೋಧಿಸಿ ದಾವಣಗೆರೆಯಲ್ಲಿ ರೈತರ ಹೋರಾಟದ ಕಾವು ಜೋರಾಗಿದೆ. ಹಲವೆಡೆ ಹೆದ್ದಾರಿ, ರಸ್ತೆ ತಡೆ ನಡೆಸಲು ಮುಂದಾದ ರೈತರನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಕಚೇರಿ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಗೆ ಯತ್ನಿಸಿದ 20 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ ಘಟನೆ ನಡೆಯಿತು.

ಕೃಷಿ ಹಾಗೂ ಎಪಿಎಂಸಿ ಕಾಯ್ದೆಗಳನ್ನ ವಿರೋಧಿಸಿ ಇಂದು ರೈತ ಸಂಘಟನೆಗಳಿಂದ ಬಂದ್ ನಡೆಸಲಾಗುತ್ತಿದ್ದು, ದಾವಣಗೆರೆ ಹೊರ ಭಾಗದ ಜಿಲ್ಲಾ ಪಂಚಾಯಿತಿ ಕಚೇರಿ ಬಳಿ ರಾಷ್ಟ್ರೀಯ ಹೆದ್ದಾರಿ 4 ನ್ನ ತಡೆದು ಪ್ರತಿಭಟನೆಗೆ ಯತ್ನಿಸಿದ ಸುಮಾರು 20 ಕ್ಕೂ ಹೆಚ್ವು ಪ್ರತಿಭಟನಾಕಾರರನ್ನ ಪೊಲೀಸರು ಅರೆಸ್ಟ್ ಮಾಡಿದ ಕಾರಣ ರೈತ ಸಂಘಟನೆಗಳ ಪ್ರಮುಖರು, ಪ್ರತಿಭಟನಾಕಾರರು ಪೊಲೀಸರ ವಿರುದ್ಧವೇ ಘೋಷಣೆಗಳನ್ನ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು.

ಅನುಮತಿ ಇಲ್ಲದಿದ್ದರೂ ಪ್ರತಿಭಟನಾಕಾರರು ಹೆದ್ದಾರಿ ಬಂದ್ ಮಾಡಲು ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳ ಕಾರ್ಯಕರ್ತರನ್ನ ಬಂಧಿಸಿ ಕರೆದೊಯ್ದದಿದ್ದಾರೆ.

Edited By : Nagesh Gaonkar
PublicNext

PublicNext

27/09/2021 03:18 pm

Cinque Terre

57.5 K

Cinque Terre

3

ಸಂಬಂಧಿತ ಸುದ್ದಿ