ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಶ್ಮೀರದಲ್ಲಿ ಭಯೋತ್ಪಾದನೆ ವಿರುದ್ಧ ಘನ ಉಪಕ್ರಮದ ಅಗತ್ಯ ಇದೆ: ಅರವಿಂದ ಕೇಜ್ರಿವಾಲ್

ನವದೆಹಲಿ: ಜಮ್ಮು ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನೆ ಮಟ್ಟ ಹಾಕಲು 'ಘನ ಉಪಕ್ರಮ'ದ ಅಗತ್ಯತೆಯಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರ ಗುಂಡಿನ ದಾಳಿಯಿಂದ ಹುತಾತ್ಮರಾದ ಐವರು ಯೋಧರ ಗೌರವಾರ್ಥ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಯಿಂದ ಹುತಾತ್ಮರಾದ ವೀರ ಯೋಧರಿಗೆ ನಮನಗಳು. ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನೆ ವಿರುದ್ಧ ಕಠಿಣ ಉಪಕ್ರಮದ ಅಗತ್ಯವಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

12/10/2021 07:38 am

Cinque Terre

46.06 K

Cinque Terre

4

ಸಂಬಂಧಿತ ಸುದ್ದಿ