ಬೆಂಗಳೂರು: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ಗೆ ಸಮನ್ಸ್ ಜಾರಿಗೊಳಿಸಲಾಗಿದೆ.
ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ನಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಡಿಸೆಂಬರ್ 22ರಂದು ಖುದ್ದು ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ ಉಲ್ಲಂಘನೆ ಹಿನ್ನೆಲೆ, ಉಪ್ಪಾರಪೇಟೆ ಠಾಣೆ ಪೊಲೀಸರು ದೂರು ನೀಡಿದ್ದರು. ಅದರಂತೆ ಸಮನ್ಸ್ ಜಾರಿ ಆಗಿದೆ. ಡಿ.ಕೆ.ಶಿವಕುಮಾರ್ ಮಾತ್ರವಲ್ಲ, ಕಾಂಗ್ರೆಸ್ ಹಿರಿಯ ನಾಯಕರಾದ ಈಶ್ವರ್ ಖಂಡ್ರೆ ಸೇರಿ ಒಟ್ಟು 6 ಮಂದಿಗೆ ನೋಟಿಸ್ ನೀಡಲಾಗಿದೆ.
PublicNext
27/11/2021 07:31 pm