ಹುಬ್ಬಳ್ಳಿ: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಇನ್ನಷ್ಟು ಬಿಗಿ ಗೊಳಿಸಲಾಗುವುದೆಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದರು.
ನಗರದ ಶ್ರೀ ಸಿದ್ಧಾರೂಢ ಸ್ವಾಮಿಗಳ ಮಠ ಹಾಗೂ ಅಲ್ಲಿನ ಗೋಶಾಲೆಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾದ ನಂತರ ಸಾವಿರಾರು ಗೋವುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಅವರು ಹೇಳಿದರು. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಗೋಮಾಳ ಜಾಗದಲ್ಲಿ ಗೋಶಾಲೆಗಳನ್ನು ತೆರೆಯಲು ಸೂಚಿಸಲಾಗಿದೆ. ಈ ನಿಟ್ಟಿನಲ್ಲಿ ಗೋಮಾಳ ಜಾಗಗಳನ್ನೂ ಸಹ ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.
ಕಸಾಯಿಖಾನೆಯಲ್ಲಿ ಗೋವುಗಳ ಹತ್ಯೆ ವಿಚಾರದಲ್ಲಿ ಅನೇಕರು ಪಿ.ಐ.ಎಲ್ ಮೊರೆ ಹೋಗಿದ್ದಾರೆ. ಈ ವಿಷಯದಲ್ಲಿ ತೀರ್ಪು ನಮ್ಮ ಪರವಾಗಿ ಬರುವ ನಿರೀಕ್ಷೆಯಿದೆ ಎಂದರು. ರಾಜ್ಯದಲ್ಲಿ ಎಂ.ಇ.ಎಸ್. ಬ್ಯಾನ್ ಮಾಡುವ ಕುರಿತು ಈಗಾಗಲೇ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸರ್ಕಾರ ತೀರ್ಮಾನ ಕೈಕೊಳ್ಳಲಿದೆ ಎಂದ ಅವರು, ರಾಜ್ಯ ಸರ್ಕಾರ ಕನ್ನಡಿಗರು ಹಾಗೂ ಕನ್ನಡ ಭಾಷೆ ರಕ್ಷಣೆಗೆ ಬದ್ಧವಾಗಿದೆ ಎಂದು ಹೇಳಿದರು.
PublicNext
19/12/2021 02:37 pm